Sunday, January 19, 2025
ದಕ್ಷಿಣ ಕನ್ನಡ

ಮಂಗಳೂರು ಮಹಾನಗರ ಪಾಲಿಕೆ ಸದಸ್ಯೆಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಜು 08 : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಸಮಯದಲ್ಲೇ ಜನಪ್ರತಿನಿಧಿಗಳಿಗೂ ಸೋಂಕು ತಗುಲುತ್ತಿರುವುದು ದೃಢವಾಗುತ್ತಿದೆ. ಈಗಾಗಲೇ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಾಜಿ ಎಂಎಲ್ ಸಿ ಪುಟ್ಟಣ್ಣ, ಕುಣಿಗಲ್ ಶಾಸಕ ಎಚ್ ಡಿ ರಂಗನಾಥ್, ಎಂ.ಕೆ ಪ್ರಾಣೇಶ್, ಜನಾರ್ದನ ಪೂಜಾರಿ , ಸಂಸದೆ ಸುಮಲತಾ ಹೀಗೆ ಹಲವು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇದೀಗ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ಕಾರ್ಪೋರೇಟರ್ ಗೂ ಕೊರೊನಾ ಸೋಂಕು ತಗುಲಿದ್ದು , ಈ ಬಗ್ಗೆ ಅವರೇ ಸಾಮಾಜಿಕ ತಾಣದಲ್ಲಿ ಈ ಕುರಿತು ಸ್ವತಃ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಾಲಿಕೆ ಸದಸ್ಯೆ ಕೆಲ ದಿನಗಳ ಹಿಂದೆ ಕುಂಜತ್ತಬೈಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭೆಯಲ್ಲಿ ಭಾಗಿಯಾಗಿದ್ದು, ಈ ಸಭೆಯಲ್ಲಿ ಭಾಗವಹಿಸಿದ ಒಬ್ಬರಲ್ಲಿ ಕೊರೊನಾ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರು ತಾವೇ ಕ್ವಾರೆಂಟೈನ್ ಗೆ ಒಳಗಾಗಿದ್ದರು. ಆದರೆ ಇಂದು ಬಂದ ವರದಿಯಲ್ಲಿ ಪಾಲಿಕೆ ಸದಸ್ಯೆಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢವಾಗಿದೆ.