Sunday, January 19, 2025
ಜಿಲ್ಲೆದಕ್ಷಿಣ ಕನ್ನಡಪುತ್ತೂರು

ಪುತ್ತೂರು ಮೂಲದ 32 ವರ್ಷದ ಮಹಿಳೆ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮೂರು ಮಂದಿ ಬಲಿ ; ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 29ಕ್ಕೆ ಏರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 08 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.08 ರ ಬುಧವಾರ ಕೊರೊನಾದಿಂದ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯಲ್ಲಿ ಕೊರೊನಾ ಏರುಗತಿಯಲ್ಲಿ ವ್ಯಾಪಿಸುತ್ತಿದ್ದು ಮಂಗಳವಾರದವಗೆಗೆ 1359 ಪ್ರಕರಣ ದೃಢಪಟ್ಟಿದೆ. ಈ ಪೈಕಿ 683 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಇನ್ನು 650 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.