Saturday, November 23, 2024
ದಕ್ಷಿಣ ಕನ್ನಡಸುಳ್ಯ

ಸುಳ್ಯ ಸರಕಾರಿ ಆಸ್ಪತ್ರೆ ವೈದ್ಯರು, ನರ್ಸ್ ಗಳ ಸಹಿತ 6 ಮಂದಿಗೆ ಕೊರೊನಾ ಪಾಸಿಟಿವ್ ; ಆತಂಕದಲ್ಲಿ ಜನತೆ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯರು, ನರ್ಸ್ ಗಳು ಸೇರಿ ಒಟ್ಟು ಆರು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕೆಲ ದಿನಗಳ ಹಿಂದೆ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಯೊಬ್ಬರಿಗೆ ಕೊರೊನಾ ಬಂದಿತ್ತು. ಬಳಿಕ ಅವರು ಮಂಗಳೂರಿಗೆ ಹೋಗಿದ್ದರು. ಆ ವ್ಯಕ್ತಿಗೆ ಚಿಕಿತ್ಸೆ ‌ನೀಡಿದ್ದ ನರ್ಸ್ ಗೆ ಕೂಡಾ ಕೊರೊನಾ ದೃಢವಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಸರಕಾರಿ ಆಸ್ಪತ್ರೆಯ ಒಬ್ಬರು ವೈದ್ಯಾಧಿಕಾರಿ, ಮೂವರು ನರ್ಸ್ ಹಾಗೂ ಇಬ್ಬರು ಡಯಾಲಿಸಿಸ್ ವಿಭಾಗದ ತಂತ್ರಜ್ಞರಿಗೆ ಕೊರೋನಾ ಪಾಸಿಟಿವ್ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಇಂದು ಮತ್ತು ನಾಳೆ ಎರಡು ದಿನದ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಈಗ 17 ಮಂದಿ ಒಳರೋಗಿಗಳಿದ್ದು ಅವರಿಗೆ ಚಿಕಿತ್ಸೆ ನೀಡಲು ಒಬ್ಬರು ವೈದ್ಯಾಧಿಕಾರಿ ಹಾಗೂ ಮೂವರು ನರ್ಸ್ ಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಇಂದು ಮತ್ತು ನಾಳೆ ಸ್ಯಾನಿಟೈಸೇಶನ್ ನಡೆಯುವುದರಿಂದ ಸೀಲ್ ಡೌನ್ ಮಾಡಲಾಗುವುದು. ಹೊಸದಾಗಿ ಬರುವ ರೋಗಿಗಳಿಗೆ ಪ್ರವೇಶವಿರುವುದಿಲ್ಲ. ಹೆರಿಗೆಗೆ ಬರುವ ವರಿಗೆ ಕೂಡ ಅವಕಾಶವಿರುವುದಿಲ್ಲ. ಡಯಾಲಿಸಿಸ್ ಗೆ ಕೂಡ ಅವಕಾಶವಿರುವುದಿಲ್ಲ ಎಂದು ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಕೆ.ವಿ. ತಿಳಿಸಿದ್ದಾರೆ.