Sunday, January 19, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ವಾಮದಪದವಿನಲ್ಲಿ ಕರ್ತವ್ಯನಿರತ ಆಶಾ ಕಾರ್ಯಕರ್ತೆ ಮೇಲೆ ದೊಣ್ಣೆಯಿಂದ ಹಲ್ಲೆ, ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಚೆನ್ನೈ ತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟು ಎಂಬಲ್ಲಿ ವ್ಯಕ್ತಿಯೋರ್ವ ಕೊರೋನಾ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆಶಾ ಕಾರ್ಯಕರ್ತೆಗೆ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಇಂದು ನಡೆದಿದೆ.

ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಿಂದ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆ,

ಜಾಹೀರಾತು
ಜಾಹೀರಾತು
ಜಾಹೀರಾತು

ಇಲ್ಲಿಗೆ ಸಮೀಪದ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿರುವ ವ್ಯಕ್ತಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳಿಗ್ಗೆ ಎಂದಿನಂತೆ ಮಮತಾ ಅವರು ಕಾರ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ದೊಣ್ಣೆಯಿಂದ ಏಕಾ ಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆಯಲ್ಲಿ ಆಶಾ ಕಾರ್ಯಕರ್ತೆಯ ತಲೆಗೆ, ಕೈಗೆ ಏಟಾಗಿದೆ. ತತ್ ಕ್ಷಣ ಅವರನ್ನು ವಾಮದಪದವು ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಬಗ್ಗೆ ವಾಮದ ಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.