Saturday, November 23, 2024
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯಲ್ಲಿ ‘ ಡೆಂಗ್ಯೂ ನಿಯಂತ್ರಣಕ್ಕಾಗಿ ಆಂದೋಲನ, ಸ್ವಚ್ಚ ಮನೆ ಪ್ರಶಸ್ತಿ’ ; ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಘೋಷಣೆ – ಕಹಳೆ ನ್ಯೂಸ್

ಬೆಳ್ತಂಗಡಿ, ಜು. 09 : ಸ್ವಚ್ಛತೆಯ ಕೊರತೆಯಿಂದಾಗಿ ಡೆಂಗ್ಯೂ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತಿದೆ. ಹಾಗಾಗಿ, ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸ್ವಚ್ಚತೆ ಅತೀ ಮುಖ್ಯವಾಗಿದ್ದು, ಸಾರ್ವಜನಿಕರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಸ್ವಚ್ಚ ಮನೆ ಆಂದೋಲನ ನಡೆಸಲು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆರೋಗ್ಯ ಇಲಾಖೆಗೆ ಸೂಚನೆಯನ್ನು ನೀಡಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜುಲೈ ೮ರಂದು ಬೆಳ್ತಂಗಡಿ ತಾಲೂಕು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಾಲೂಕಿನಲ್ಲಿರುವ 248 ಆಶಾಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯ ತಲಾ 10 ಅತ್ಯಂತ ಸ್ವಚ್ಚವಾಗಿಟ್ಟುಕೊಂಡಿರುವ ಮನೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಆ 2,500 ಮನೆಗಳಿಗೆ ಸ್ವಚ್ಚ ಮನೆ ಪ್ರಶಸ್ತಿಯನ್ನು ನೀಡುತ್ತೇವೆ ಎಂದು ಶಾಸಕರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಾಲೂಕು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿಯವರು ಸ್ವಚ್ಚಮನೆ ಪರಿಕಲ್ಪನೆಯನ್ನು ಶಾಸಕರ ಮುಂದುವರಿಸಿದ್ದಾರೆ. ಕೂಡಲೇ, ಪ್ರತಿಕ್ರಿಯಿಸಿದ ಅವರು ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಗತಗೊಳಿಸುವಂತೆ ಸೂಚನೆಯನ್ನು ನೀಡಿದ್ದಾರೆ. ತಾಲೂಕಿನಲ್ಲಿ ವ್ಯಾಪಕವಾಗುತ್ತಿರುವ ಡೆಂಗ್ಯೂ ಸೇರಿದಂತೆ ಹಲವು ಸಾಂಕ್ರಾಮಿಕ ರೋಗ ತಡೆಗಟ್ಟಲು ಕೈಗೊಂಡಿರುವ ಸ್ವಚ್ಚಮನೆ ಆಂದೋಲನಕ್ಕೆ ತಾಲೂಕಿನಾದ್ಯಂತ ವ್ಯಾಪಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಮಾತ್ರವಲ್ಲದೆ, ಸ್ವಚ್ಚಮನೆ ಆಂದೋಲನ ಇತರ ತಾಲೂಕುಗಳಿಗೂ ಮಾದರಿ ಆಂದೋಲನವಾಗಿದೆ.