Breaking News : ಬಂಟ್ವಾಳದಲ್ಲಿ ಕರ್ತವ್ಯನಿರತ ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡಸಿದ ಅಬ್ದುಲ್ ಸಲಾಂ – ಕಹಳೆ ನ್ಯೂಸ್
ಬಂಟ್ವಾಳ : ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದ್ದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೋಲೀಸರ ಮೇಲೆಯೇ ಹಲ್ಲೆ ನಡೆದ ಪ್ರಕರಣ ವರದಿಯಾಗಿದೆ. ಸಲಾಂ ಎಂಬ ವ್ಯಕ್ತಿ ಮಾರಕಾಯುಧದಿಂದ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ.
ಏನಿದು ಘಟನೆ :
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಶೈಲೇಶ್ ಟಿ ರವರು ಇಲಾಖಾ ವಾಹನದಲ್ಲಿ ಪಿಸಿ ನಿರಂಜನ್ ರವರೊಂದಿಗೆ ತೆರಳಿದ್ದರು. ಆಗ ಸ್ಥಳದಲ್ಲಿ ಕೈಯಲ್ಲಿ ಮಾರಕಾಯುಧವಾದ ( ಕಬ್ಬಿಣದ ರಾಡನ್ನು ) ಹಿಡಿದುಕೊಂಡು ಗಲಾಟೆ ಮಾಡುತ್ತಿದ್ದ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಬಲ್ಲೆಕೋಡಿಯ ನಿವಾಸಿ ಸುಲೈಮಾನ್ ನ ಮಗ ಅಬ್ದುಲ್ ಸಲಾಂ (28) ಎಂಬಾತನ ಬಳಿ ತೆರಳಿ ಗಲಾಟೆಯನ್ನು ನಿಯಂತ್ರಿಸಲು ಪ್ರಯತ್ನಿಸಿದಾಗ ಸಲಾಂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿ ಕೈಯಲ್ಲಿದ್ದ ಮಾರಕಾಯುಧವಾದ ಕಬ್ಬಿಣದ ರಾಡಿನಲ್ಲಿ ಏಕಾಏಕಿಯಾಗಿ ಕೊಲೆ ಮಾಡುವ ಉದ್ದೇಶದಿಂದ ಪೊಲೀಸರಿಗೆ ಹಲ್ಲೆ ನಡೆಸಿದ್ದಾನೆ.
ಪೋಲೀಸರು ಸ್ಥಳಕ್ಕೆ ಆಗಮಿಸಿದ್ದ ಇಲಾಖಾ ವಾಹನವನ್ನು ರಾಡ್ ನಿಂದ ಹೊಡೆದು ಕಾಲಿನಿಂದ ತುಳಿದು ಕೈಯಿಂದ ಹೊಡೆದು ಜಖಂಗೊಳಿಸಿ ಸುಮಾರು 10,000 ರೂಗಳ ನಷ್ಟವುಂಟು ಮಾಡಿರುವುದಾಗಿದೆ ಎಂದು ಪೋಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳದಲ್ಲಿ ಸೇರಿದ ಸಾರ್ವಜನಿಕರು ಹಲ್ಲೆ ನಡೆಯುವುದನ್ನು ತಡೆಯಲು ಬಂದಾಗ ಆರೋಪಿಯು ಅವರ ಮೇಲು ಹಲ್ಲೆಗೆ ಮುಂದಾದಾಗ ಸಾರ್ವಜನಿಕವಾಗಿ ಆರೋಪಿಗೆ ಥಳಿಸಿದ್ದು ಈತನಿಗೂ ಗಾಯ ನೋವುಗಳಾಗಿರುತ್ತದೆ.
ಹಲ್ಲೆಗೊಳಗಾದ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಶೈಲೇಶ್ ಟಿ ಮತ್ತು ಇತರ 3 ಪೊಲೀಸರು ಚಿಕಿತ್ಸೆಯ ಬಗ್ಗೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಹಾಗೂ ಆರೋಪಿಯನ್ನು ಚಿಕಿತ್ಸೆಯ ಬಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕಲಂ : 353, 504, 506, 332, 307,427 ಐಪಿಸಿ ಮತ್ತು 2ಎ ಕೆಪಿಡಿಎಲ್ ಪಿ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.