Friday, November 22, 2024
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

Breaking News : ಸೋಮವಾರ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಲಾಕ್ ಡೌನ್ ಶಾಕ್..? ; ಜಿಲ್ಲಾಧಿಕಾರಿಗಳೊಂದಿಗೆ ಸಿ.ಎಂ. ಬಿ.ಎಸ್. ವೈ. ವಿಡಿಯೋ ಕಾನ್ಫರೆನ್ಸ್ – ಕಹಳೆ ನ್ಯೂಸ್

ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರದಿಂದ ಒಂದು ಲಾಕ್‍ಡೌನ್ ಆಗಲಿವೆ. ಇದೇ ರೀತಿ ಸೋಮವಾರ ಉಳಿದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸುವ ಸಾಧ್ಯತೆಗಳಿವೆ.

ಸೋಮವಾರ ಜಿಲ್ಲಾಧಿಕಾರಿಗಳ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ಸಂಜೆ ಲಾಕ್‍ಡೌನ್ ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಚ್ಚು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡಬಹುದು. ಹಾಗೆ ಅಂತರ್ ಜಿಲ್ಲಾ ಪ್ರವೇಶಕ್ಕೂ ನಿರ್ಬಂಧ ಹೇರಬಹುದು. ಹಾಗೆ ಸೋಂಕು ಕಡಿಮೆ ಇರೋ ಜಿಲ್ಲೆಗಳಲ್ಲಿ ಹಾಫ್ ಲಾಕ್‍ಡೌನ್ ಅಥವಾ ಸೀಲ್‍ಡೌನ್ ತಂತ್ರಗಳನ್ನು ಬಳಸಬಹುದು. ಸದ್ಯಕ್ಕೆ ಎರಡು ಜಿಲ್ಲೆಗಳಿಗೆ ಬೀಗ ಹಾಕಲಾಗಿದ್ದು, ಸೋಮವಾರ ರಾಜ್ಯ ಸರ್ಕಾರ ಪ್ರಕಟಿಸುವ ನಿರ್ಧಾರದತ್ತ ಎಲ್ಲರ ಚಿತ್ತವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಕನ್ನಡ, ಉಡುಪಿ, ಯಾದಗಿರಿ, ಕಲಬುರಗಿ, ಬಳ್ಳಾರಿ ಸೇರಿದಂತೆ ಒಟ್ಟು 8 ಜಿಲ್ಲೆಗಳು ಬಹುತೇಕ ಲಾಕ್ ಡೌನ್ ಆಗಲಿದೆ ಎಂಬ ಮಾಹಿತಿ ಲಭ್ಯವಾಗಿವೆ.