Sunday, January 19, 2025
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬ್ಯೂಟಿ ಪಾರ್ಲರ್ ಬಂದ್ – ಅಸೋಸಿಯೇಷನ್ ನ ಅಧ್ಯಕ್ಷೆ ಬಬಿತಾ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಕೊರೊನಾ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಬ್ಯೂಟಿಪಾರ್ಲರ್ ಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ.

ದ.ಕ ಜಿಲ್ಲಾ ಬ್ಯೂಟಿಪಾರ್ಲರ್ ಅಸೋಸಿಯೇಷನ್ ಸಭೆ ನಡೆಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲಾದ್ಯಂತ ದಿನೇ ದಿನೇ ಕೊರೊನಾ ಪಾಸಿಟಿವ್ ಹೆಚ್ಚಾಗುತ್ತಿದ್ದು, ಗ್ರಾಹಕರು ಹಾಗೂ ಸೌಂದರ್ಯ ತಜ್ಞೆಯರ ಆರೋಗ್ಯದ ಹಿತ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಬ್ಯೂಟಿ ಪಾರ್ಲರ್ ಗಳನ್ನು ಬಂದ್ ಮಾಡಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ನೋಡಿ ಬ್ಯೂಟಿ ಪಾರ್ಲರ್ ಓಪನ್ ಮಾಡಲು ತೀರ್ಮಾನಿಸಲಾಗುವುದು ಎಂದು ಅಸೋಸಿಯೇಷನ್ ನ ಅಧ್ಯಕ್ಷೆ ಬಬಿತಾ ಶೆಟ್ಟಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು