Sunday, January 19, 2025
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ ; ಮಾಡ್ನೂರು ಗ್ರಾಮದ 50 ವರ್ಷದ ಸೋಂಕಿತ ವ್ಯಕ್ತಿ ಸಾವು – ಕಹಳೆ ನ್ಯೂಸ್

ಪುತ್ತೂರು : ನ್ಯುಮೋನಿಯಾದಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಡ್ನೂರು ಗ್ರಾಮದ ಮೂಲಡ್ಕ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೊರೋನಾ ದೃಢಪಟ್ಟಿದ್ದು, ತೀರಾ ಅನಾರೋಗ್ಯದಿಂದಾಗಿ ಜು.12ರಂದು ಅವರು ಮೃತಪಟ್ಟಿದ್ದಾರೆ.

ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ತೀರಾ ಗಂಭೀರ ಸ್ಥಿತಿಗೆ ಸಂಬಂಧಿಸಿ ಅವರನ್ನು ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆಯಲ್ಲಿ ವ್ಯಕ್ತಿಗೆ ಕೊರೋನಾ ದೃಢಪಟ್ಟಿದ್ದು, ಜು.12ರಂದು ಅವರು ಮೃತಪಟ್ಟಿದ್ದಾರೆ. ಮೃತ ದೇಹವನ್ನು ಪುತ್ತೂರು ಮಾಡ್ನೂರು ಕರೆ ತಂದು ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ರೈ ಕಹಳೆ ನ್ಯೂಸ್ ಗೆ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು