Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಬೆಳ್ತಂಗಡಿಯಲ್ಲಿ ಕೊರೊನಾಗೆ ಇಂದು ವೃದ್ಧ ಬಲಿ ; ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಕೊರೊನ ಸೋಂಕಿತ ವೃದ್ಧ ಮನೆಯಲ್ಲೇ ಸಾವು – ಕಹಳೆ ನ್ಯೂಸ್

ಬೆಳ್ತಂಗಡಿ : ಸದ್ಯಕ್ಕಂತೂ ಹೆಮ್ಮಾರಿ ಕೊರೊನ ತನ್ನ ರುದ್ರನರ್ತನವನ್ನು ನಿಲ್ಲಿಸುವಂತೆ ಕಾಣುತ್ತಿಲ್ಲ. ಕೊರೊನ ಸೋಂಕಿನ ಕಾರಣದಿಂದ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60 ವರ್ಷ ಪ್ರಾಯದ ವೃಧ್ದ ಇಂದು ಬೆಳಿಗ್ಗೆ ತಮ್ಮ ಸ್ವಗ್ರಹದಲ್ಲಿ ಸಾವನ್ನಪ್ಪಿದ್ದಾರೆ.

ಅನಾರೋಗ್ಯದ ಕಾರಣದಿಂದ ಎರಡು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು ,ಅದರ ವರದಿ ಇದೀಗ ಕೈ ಸೇರಿದ್ದು ಸೋಂಕು ದೃಢ ಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತ ದೇಹ ಮನೆಯಲಿದ್ದು ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು