Sunday, January 19, 2025
ಸುದ್ದಿ

ಮದ್ಯಪ್ರಿಯರಿಗೆ ‘ಬಿಗ್ ಶಾಕ್’ : ಲಾಕ್‌ಡೌನ್‌ ಜಾರಿಯಾಗಿರುವ ಜಿಲ್ಲೆಗಳಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್-ಕಹಳೆ ನ್ಯೂಸ್

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಾಗಿರುವ ಜಿಲ್ಲೆಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಬೆಂಗಳೂರು ನಗರ-ಬೆಂಗಳೂರು ಗ್ರಾಮಾಂತರ ಜಿಲ್ಲೆಗಳೊಂದಿಗೆ ಲಾಕ್ ಡೌನ್ ಗೆ ನಿರ್ಧರಿಸಿರುವ ಜಿಲ್ಲೆಗಳಿಗೂ ಇದೇ ನಿಯಮ ಅನ್ವಯಗೊಳ್ಳಲಿದೆ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾರಕ ಕೊರೊನಾ ಸೋಂಕು ಹೆಚ್ಚುತ್ತಲೇ ಇದ್ದು, ಸೋಂಕು ನಿಯಂತ್ರಣ ಸಲವಾಲಾಗಿದೆ. ಹೀಗಾಗಿ ರಾಜ್ಯ ಸರ್ಕಾರ ತಜ್ಞರ ಅಭಿಪ್ರಾಯ ಪಡೆದು ಒಂದು ವಾರಗಳ ಕಾಲ ಲಾಕ್‌ಡೌನ್‌ ಘೋಷಣೆ ಮಾಡಿದೆ. ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ರಾತ್ರಿ 8 ಗಂಟೆಯಿಂದಲೇ ಲಾಕ್ ಡೌನ್ ಶುರುವಾಗಲಿದೆ. ಮತ್ತೊಂದೆಡೆ ನಿನ್ನೆ ಸಿಎಂ ಜೊತೆ ಎಲ್ಲ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸಿದ್ದು, ಇತರೇ ಜಿಲ್ಲೆಗಳಲ್ಲೂ ಲಾಕ್ ಡೌನ್ ಆಗಲಿದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಜಾರಿಯಲ್ಲಿರುವ ಜಿಲ್ಲೆಗಳಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದೆಂದು ನಿರ್ಧರಿಸಲಾಗಿದೆ. ಈ ಕುರಿತಂತೆ ಅಬಕಾರಿ ಸಚಿವ ಎಚ್.ನಾಗೇಶ್ ಅವರೇ ಸ್ಪಷ್ಟಪಡಿಸಿದ್ದಾರೆ…

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು