ದ.ಕ ಜಿಲ್ಲೆ ಇಂದು ರಾತ್ರಿ 8 ರಿಂದ ಲಾಕ್ ಡೌನ್ – ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನರು- ಕಹಳೆ ನ್ಯೂಸ್
ದಕ್ಷಿಣ ಕನ್ನಡ ಜಿಲ್ಲೆ ಇಂದು ರಾತ್ರಿ 8 ರಿಂದ ಲಾಕ್ ಡೌನ್ ಆಗಲಿದ್ದು, ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಮುಗಿಬಿದ್ದಿದ್ದಾರೆ.ಮಂಗಳೂರಿನ ಕದ್ರಿ ಮಾರುಕಟ್ಟೆಯಲ್ಲಿ ಜನರು ಸಾಮಾಜಿಕ ಅಂತರವನ್ನು ಮರೆತು ದಿನಸಿ ವಸ್ತುಗಳನ್ನು ಖರೀದಿ ಮಾಡುತ್ತಿದ್ದಾರೆ.ಲಾಕ್‌ಡೌನ್ ವೇಳೆ ದಿನಸಿ ವಸ್ತುಗಳ ಖರೀದಿಗೆ ಜಿಲ್ಲಾಡಳಿತ ಅವಕಾಶ ನೀಡಿದ್ದರೂ ಕೂಡಾ ಜನರು ಇಂದೇ ಅಗತ್ಯ ವಸ್ತುಗಳನ್ನು ಖರೀದಿ ಮಾಡಲು ಮುಗಿಬಿದ್ದಿದ್ದಾರೆ.
ಇಂದು ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಯಲ್ಲಿದ್ದು, ಆಹಾರ ,ಹಾಗೂ ಹಣ್ಣು ತರಕಾರಿಗೆ ಖರೀದಿಗೆ ಬೆಳಗ್ಗೆ 8ರಿಂದ ಮಧ್ಯಾಹ್ನ 11 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ತುರ್ತು ಸಂದರ್ಭದಲ್ಲಿ ಮತ್ತು ವೈದ್ಯಕೀಯ ತುರ್ತು ಸೇವೆಗಳ ಪ್ರಯಾಣಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಖಾಸಗಿ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿದೆ.