Recent Posts

Sunday, January 19, 2025
ರಾಜಕೀಯಶಿಕ್ಷಣಸುದ್ದಿ

ಪದವಿ, ಸ್ನಾತಕೋತ್ತರ , ಡಿಪ್ಲೋಮಾ ಕೋರ್ಸ್ ವಿದ್ಯಾರ್ಥಿಗಳಿಗೆ ಬಂಪರ್ ; ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್ 19 ಹಿನ್ನೆಲೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಪ್ರಥಮ ಮತ್ತು ದ್ವಿತೀಯ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಪರೀಕ್ಷೆ ಸಂಬಂಧ ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿದೆ. ಇದನ್ನು ವಾಪಸ್ ಕೊಡಿಸಿ ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ. ಪರೀಕ್ಷೆ ರದ್ದಾಗಿದ್ದರೂ ಕೂಡ ಮೌಲ್ಯ ಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲಾಗುವುದು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು