Sunday, January 19, 2025
ದಕ್ಷಿಣ ಕನ್ನಡಸುದ್ದಿ

ಖಾಸಗಿಯಲ್ಲಿ ಉಚಿತ ಕೊರೊನಾ ಚಿಕಿತ್ಸೆ- ಎಲ್ಲಿ, ಹೇಗೆ ? ; ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ – ಕಹಳೆ ನ್ಯೂಸ್

ಮಂಗಳೂರು, ಜು. 16 : ಕೊರೊನಾ ಸೋಂಕಿಗೆ ಉಚಿತ ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಜನತೆಯಲ್ಲಿನ ಗೊಂದಲ ದೂರವಾದಂತಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಪಾಸಿಟಿವ್ ಹೊಂದಿದ್ದು, ಯಾವುದೇ ರೋಗಲಕ್ಷಣಗಳಿಲ್ಲದೇ ಇದ್ದವರಿಗೆ ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ, ಮನೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭ ಇತರರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದ್ದು, ಮನೆಯಲ್ಲಿ ಪ್ರತ್ಯೇಕ ಕೊಠಡಿ ಹಾಗೂ ಅದರೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ ಹೋಂ ಐಸೋಲೇಷನ್ ಗೆ ಅವಕಾಶವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮನೆಯಲ್ಲಿ ವ್ಯವಸ್ಥೆ ಇಲ್ಲದಿದ್ದಲ್ಲಿ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ವ್ಯವಸ್ಥೆ:

ಇನ್ನು ಮನೆಯಲ್ಲಿ ಪ್ರತ್ಯೇಕ ಕೊಠಡಿ ಹಾಗೂ ಶೌಚಾಲಯದ ವ್ಯವಸ್ಥೆ ಇಲ್ಲದೇ ಇದ್ದಲ್ಲಿ ಅಂತಹವರಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸ್ರ್ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸದ್ಯ ಕೊಣಾಜೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಮತ್ತಷ್ಟು ತೆರೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಚಿಕಿತ್ಸೆ ಬೇಕಾದವರಿಗೆ ಏನಿದೆ ವ್ಯವಸ್ಥೆ?

ಇನ್ನು ರೋಗ ಲಕ್ಷಣಗಳಿದ್ದು, ಚಿಕಿತ್ಸೆ ಬೇಕಾಗಿದ್ದಲ್ಲಿ ಅಂತಹವರಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ ಸ್ಥಳವಕಾಶವಿಲ್ಲದಿದ್ದಲ್ಲಿ ಮಾತ್ರ ಸರಕಾರ ಗೊತ್ತು ಪಡಿಸಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.

ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳಿದವರು ಏನು ಮಾಡಬೇಕು?
ಇನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ನೇರವಾಗಿ ಖಾಸಗಿ ಆಸ್ಪತ್ರೆಗೆ ತೆರಳುವವರು, ಕಡ್ಡಾಯವಾಗಿ ಆಯಾ ಆಸ್ಪತ್ರೆಗಳಿಗೆ ಗೊತ್ತುಪಡಿಸಿರುವ ಕೋವಿಡ್ ಸಂಬಂಧಿಸಿದ ಅಧಿಕಾರಿಗಳಿಗೆ ಮಾಹಿತಿ ನೀಡಬೇಕಾಗುತ್ತದೆ. ಮೊಬೈಲ್ ಸಂಖ್ಯೆಗೆ ಕರೆ ಮಾಡಿ ದಾಖಲಾಗಿರುವ ಬಗ್ಗೆ ಮಾಹಿತಿ ನೀಡಬೇಕಾಗುತ್ತದೆ. ಸರಕಾರ ಗೊತ್ತುಪಡಿಸಿರುವ ಆಸ್ಪತ್ರೆಗಳಲ್ಲಿ ಆ ಮೂಲಕ ಉಚಿತ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಇನ್ನು ಈ ಆಸ್ಪತ್ರೆಗಳಲ್ಲಿ 100 ಬೆಡ್ ಗಳನ್ನು ಖಾಲಿ ಉಳಿಸಲು ಜಿಲ್ಲಾಡಳಿತದ ಅಧಿಕಾರಿಗಳು ಆಸ್ಪತ್ರೆಗಳ ಪ್ರಮುಖರೊಂದಿಗೆ ಚರ್ಚಿಸುತ್ತಿದೆ.

ಎಲ್ಲಿ ಉಚಿತ ಕೊರೊನಾ ಪರೀಕ್ಷೆ ಮಾಡಲಾಗುತ್ತದೆ?
ಇನ್ನು ಕೊರೊನಾ ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ವೆನ್ಲಾಕ್ ಆಸ್ಪತ್ರೆಯಲ್ಲಿ ಉಚಿತ ಪರೀಕ್ಷೆಗೆ ಅವಕಾಶವಿದೆ. ಉಳಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಯಾವುದೇ ಉಚಿತ ಚಿಕಿತ್ಸೆಗೆ ವ್ಯವಸ್ಥೆಗಳಿಲ್ಲ. ಆದರೂ ಕೂಡ ದೂರದ ತಾಲೂಕಿನ ಜನತೆಯನ್ನು ಹಿತದೃಷ್ಟಿಯಲ್ಲಿರಿಸಿಕೊಂಡು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಸ್ವಾಬ್ ಸಂಗ್ರಹಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಉದಾಹರಣೆಗೆ: ಸುಳ್ಯದ ವ್ಯಕ್ತಿಯೊಬ್ಬರು ಅಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಪರೀಕ್ಷೆಗಾಗಿ ಸ್ವಾಬ್ ನೀಡಿದ್ದಲ್ಲಿ, ಆ ವ್ಯಕ್ತಿಯ ಸ್ವಾಬ್ ಪರೀಕ್ಷೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯಲಿದೆ. ಇದಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ಸ್ವಾಬ್ ಸಂಗ್ರಹದ ಸಂದರ್ಭದಲ್ಲಿ ಬಳಸುವ ಪಿಪಿಇ ಕಿಟ್ ಖರ್ಚನ್ನು ಸರಕಾರ ಭರಿಸುವ ಬಗ್ಗೆ ಚರ್ಚೆ ನಡೆಸಲಾಗುವುದು. ಸದ್ಯ ಈ ಬಗ್ಗೆ ಯಾವುದೇ ನಿರ್ಧಾರ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯಾವ ಯಾವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ?

ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ-9737007132

ಎ.ಜೆ. ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ-9449937129

ಶ್ರೀನಿವಾಸ್ ವೈದ್ಯಕೀಯ ವಿಜ್ಞಾನ ಸಂಸ್ಥೆ-9901244712

ಕೆವಿಜಿಮೆಡಿಕಲ್ಕಾಲೇಜುಹಾಗೂಆಸ್ಪತ್ರೆ-9480013503

ಇಂಡಿಯನ್ಆಸ್ಪತ್ರೆಮತ್ತುಹೃದಯಸಂಸ್ಥೆ-9845403347

ಜಸ್ಟೀಸ್ಕೆ.ಎಸ್. ಹೆಗ್ಡೆಚಾರಿಟೇಬಲ್ಟ್ರಸ್ಟ್-9740083240

ಕಣಚೂರುಆಸ್ಪತ್ರೆಮತ್ತುಸಂಶೋಧನಾಕೇಂದ್ರ-9900098782

ಕೆ.ಎಂ.ಸಿ. ಆಸ್ಪತ್ರೆಅತ್ತಾವರ-9972388991

ಯೆನೆಪೊಯಮೆಡಿಕಲ್ಕಾಲೇಜುಆಸ್ಪತ್ರೆ-9901730949