Sunday, November 24, 2024
ದಕ್ಷಿಣ ಕನ್ನಡರಾಜಕೀಯಸುದ್ದಿ

‘ದ.ಕ. ಜಿಲ್ಲೆಗೆ 25 ಸಾವಿರ ಕೊವೀಡ್ ರ್‍ಯಾಪಿಡ್ ಟೆಸ್ಟ್‌ಕಿಟ್‌, 15 ಆಂಬುಲೆನ್ಸ್‌ ಪೂರೈಕೆ’ ; ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು, ಜು.17  : ದ.ಕ. ಜಿಲ್ಲೆಗೆ 25 ಸಾವಿರ ಕೊವೀಡ್ ರ್‍ಯಾಪಿಡ್ ಟೆಸ್ಟ್‌ಕಿಟ್‌, 15 ಆಂಬುಲೆನ್ಸ್‌ ಪೂರೈಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಅಶ್ವತ್‌ ನಾರಾಯಣ ಅವರು ಭರವಸೆ ನೀಡಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯ ಕುರಿತು ಉಪ ಮುಖ್ಯಮಂತ್ರಿಗಳಾದ ಅಶ್ವತ್‌ ನಾರಾಯಣ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಚರ್ಚೆ ನಡೆಸಿದ್ದು ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಅವರು, ಕೊರೊನಾ ಸೋಂಕಿತರು, ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ್ದ ಕೂಡಲೇ, ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು ಹಾಗೂ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು ಎಂದು ಸಚಿವರು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೇ ಇನ್ನು ಮುಂದೆ ಕೊರೊನಾ ಚಿಕಿತ್ಸೆಗೆ ಒಳಪಡುವವರು ಮತ್ತು ಕೊರೊನಾ ಟೆಸ್ಟ್‌ ಮಾಡಿಸಿಕೊಳ್ಳಬೇಕಾದವರು ಆತಂಕ ಪಡಬೇಕಾದ ಅವಶ್ಯಕತೆ ಇಲ್ಲ ಎಂದು ಭರವಸೆ ನೀಡಿದ ಡಿಸಿಎಂ ಅಶ್ವತ್‌ ಅವರು, ಈ ನಿಟ್ಟಿನಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿದರು.

ಜಿಲ್ಲೆಯ ನೆರವಿಗೆ ಬಂದ ಡಿಸಿಎಂ ಅಶ್ವತ್‌ ನಾರಾಯಣ ಹಾಗೂ ಮುಖ್ಯಮಂತ್ರಿಗಳಾದ ಬಿ ಎಸ್‌ ಯಡಿಯೂರಪ್ಪನವರಿಗೆ ಸಚಿವ ಕೋಟಾ ಶ್ರೀನಿವಾಸ್‌ ಅವರು ಧನ್ಯವಾದ ಸಲ್ಲಿಸಿದರು.