ಶ್ರೀನಗರ, ಜು.18 : ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮ್ಶಿಪೋರಾ ಪ್ರದೇಶದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ.
ಈ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತವಾದ ಮಾಹಿತಿ ದೊರೆತ ಮೇರೆಗೆ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ.
ಶುಕ್ರವಾರವೂ ಕೂಡಾ ಭಾರತೀಯ ಸೇನಾಪಡೆ ಕುಲ್ಗಾಂ ಜಿಲ್ಲೆಯ ನಾಗ್ನಾಡ್-ಚಿಮ್ಮರ್ ಎಂಬ ಪ್ರದೇಶದಲ್ಲಿ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದ್ದರು.