Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 237 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ನಾಲ್ಕು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಜು.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಶನಿವಾರದಂದು ಮತ್ತೆ 237 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3311ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 109 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ, ದಕ್ಷಿಣ ಕನ್ನಡದಲ್ಲಿ 1848 ಕೊರೊನಾ ಸಕ್ರಿಯ ಪ್ರಕರಣಗಳಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿ :

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಇಂದು ಮತ್ತೆ 4 ಮಂದಿ ಚಿಕಿತ್ಸೆ ಫಲಕಾರಿಯಾಗದೆ, ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶನಿವಾರದಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಉಲ್ಲೇಖಿಸಿದೆ. ಇನ್ನು ಈ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ.

ಮೃತರ ಪೈಕಿ ಪುತ್ತೂರು ಮೂಲದ 74 ವರ್ಷದ ಮಹಿಳೆ ಹೃದಯ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರಿನ 67 ವರ್ಷದ ವ್ಯಕ್ತಿ ಅನಾರೋಗ್ಯದಿಂದಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳೂರಿನ 49 ವರ್ಷದ ಮಹಿಳೆ ಕಿಡ್ನಿ ಸಮಸ್ಯೆ ಸೇರಿದಂತೆ ಇತರ ಅನಾರೋಗ್ಯದಿಂದ ಬಳಲುತ್ತಿದ್ದರು. ಇನ್ನು ಮಂಗಳೂರು ಮೂಲದ 61 ವರ್ಷದ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಗಮನಕ್ಕೆ: ರಾಜ್ಯ ಹೆಲ್ತ್ ಬುಲೆಟಿನ್ ‌ನಲ್ಲಿ ಇಂದು ದ.ಕ ಜಿಲ್ಲೆಯಲ್ಲಿ 509 ಎಂದು ಪ್ರಕರಣ ಎಂದು ದಾಖಲಾಗಿದೆ. ನಿನ್ನೆ 311 ಪ್ರಕರಣವಿದ್ದರೂ ರಾಜ್ಯ ಬುಲೆಟಿನ್ ನಲ್ಲಿ ತಾಂತ್ರಿಕ ದೋಷದಿಂದ 39 ಎಂದು ದಾಖಲಾಗಿತ್ತು. ನಿನ್ನೆ ದಾಖಲಿಸದ ಮತ್ತು ಇಂದಿನ ಒಟ್ಟು ಪ್ರಕರಣ ಸೇರಿಸಿ ಇಂದು ರಾಜ್ಯ ಬುಲೆಟಿನ್ ನಲ್ಲಿ 509 ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ ಇಂದು ಜಿಲ್ಲಾ ಬುಲೆಟಿನ್ ಪ್ರಕಾರ ಒಟ್ಟು 237 ಪಾಸಿಟಿವ್ ಪತ್ತೆ.