Recent Posts

Sunday, January 19, 2025
ಸುದ್ದಿ

ಆಗಸ್ಟ್‌‌ 5ರಂದು ಹಿಂದೂಗಳ ಮಾಹಾ ಸಂಕಲ್ಪ ಶ್ರೀರಾಮಮಂದಿರ ನಿರ್ಮಾಣಕ್ಕೆ ಶುಭ ಮುಹೂರ್ತ ; ಪೇಜಾವರ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಭೂಮಿ ಪೂಜೆ ನೆರವೇರಿಸಲಿದ್ದಾರೆ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಅಯೋಧ್ಯೆ, ಜು 18 : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರ ನಿರ್ಮಾಣಕ್ಕೆ ಪೂಜೆ ನೆರವೇರಿಸುವ ಬಗ್ಗೆ ಶನಿವಾರ ಮಧ್ಯಾಹ್ನ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌‌‌ ಸಭೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ನಡೆದಿರುವ ಸಭೆಯಲ್ಲಿ ಆಗಸ್ಟ್‌‌ 5ರಂದು ರಾಮಮಂದಿರ ನಿರ್ಮಾಣಕ್ಕೆ ಪೂಜೆ ನಡೆಸುವ ಬಗ್ಗೆ ತೀರ್ಮಾನ ಮಾಡಿರುವುದಾಗಿ ಉನ್ನತ ಮೂಲಗಳು ಮಾಹಿತಿ ನೀಡಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಗಸ್ಟ್‌‌ 5ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರದ ಪೂಜಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನ ಮಾಡಲು ಟ್ರಸ್ಟ್‌ ತೀರ್ಮಾನ ಮಾಡಿದ್ದು, ಅದರಂತೆ ಪೂಜೆಯಲ್ಲಿ ಪ್ರಧಾನಿಮೋದಿ ಅವರು ಭಾಗವಹಿಸಲಿದ್ದಾರೆ ಎನ್ನಲಾಗಿದೆ.

ಇಂದು ನಡೆದ ಸಭೆಯಲ್ಲಿ 15 ಟ್ರಸ್ಟೀಗಳಲ್ಲಿ 12 ಮಂದಿ ಮಾತ್ರ ಪಾಲ್ಗೊಂಡಿದ್ದರು. ಉಳಿದ ಮೂರು ಟ್ರಸ್ಟೀಗಳು ಆನ್‌ಲೈನ್‌‌ ಮೂಲಕ ಸಭೆಯಲ್ಲಿ ಭಾಗವಹಿಸಿದ್ದು, ಈ ಪೈಕಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟಿಗಳಲ್ಲಿ ಒಬ್ಬರಾದ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ಕೂಡಾ ಭಾಗವಹಿಸಿದ್ದಾರೆ.