Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ ಚಿಕ್ಕಮ್ಮ ನಿಧನ ; ಕೋವಿಡ್ ಸರಕಾರಿ ನಿಯಮದಂತೆ ಅಂತ್ಯಕ್ರಿಯೆ ನಡೆಸಿದ ಹಿಂಜಾವೇ – ಬಿಜೆಪಿ ಮುಖಂಡರು – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತ ವ್ಯಕ್ತಿಯ ೮೫ ವರ್ಷ ಪ್ರಾಯದ ಚಿಕ್ಕಮ್ಮ ಜು.18 ರಂದು ನಿಧನರಾಗಿದ್ದಾರೆ.

ಇತ್ತಿಚೆಗೆ ಕೆಮ್ಮಿಂಜೆ ಗ್ರಾಮದ ಮರೀಲ್ ಮದಗ ನಿವಾಸಿಯೊಬ್ಬರು ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜು.18ರಂದು ಅವರ ಚಿಕ್ಕಮ್ಮ ಲಕ್ಷ್ಮೀ (85ವ) ರವರು ವಯೋಸಹಜ ಮೃತಪಟ್ಟಿದ್ದಾರೆ. ಅವರ ಪುತ್ರನಿಗೆ ಕೊರೋನಾ ಸೋಂಕು ಹಿನ್ನಲೆಯಲ್ಲಿ ತಾಯಿಯ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಆದರೆ ವರದಿ ಬಂದಿಲ್ಲ ಆದರೆ ಸೋಂಕಿತ ಪುತ್ರನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಮೃತದೇಹವನ್ನು ಕೋವಿಡ್ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಪುತ್ತೂರು ಸ್ಮಶಾನದಲ್ಲಿ ಸರಕಾರಿ ನಿಯಮದಂತೆ ಸಂಜೆ ಅಂತ್ಯ ಸಂಸ್ಕಾರ ನಡೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಿಂಜಾವೇ, ಬಿಜೆಪಿ ನೇತೃತ್ವದಲ್ಲಿ ಅಂತ್ಯ ಸಂಸ್ಕಾರ
ಕೋವಿಡ್ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮೃತ ದೇಹವನ್ನು ಪಿಪಿಇ ಕಿಟ್ ಧರಿಸಿಯೇ ಅಂತ್ಯ ಸಂಸ್ಕಾರ ಮಾಡಬೇಕಾಗಿದ್ದ ಹಿನ್ನೆಲೆಯಲ್ಲಿ ಪುತ್ತೂರು ಹಿಂದೂ ಜಾಗಾರಣಾ ವೇದಿಕೆ ಯುವಕರು ಪುತ್ತೂರು ಮಡ್ಯಲಕಟ್ಟೆಯಲ್ಲಿರುವ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಯಿತು. ಹಿಂದೂ ಜಾಗರಣಾ ವೇದಿಕೆ ತಾಲೂಕು ಅಧ್ಯಕ್ಷ ಅಶೋಕ್ ತ್ಯಾಗರಾಜನಗರ, ನಗರ ಕಾರ್ಯದರ್ಶಿ ಪುಟ್ಟಣ್ಣ ಮರಿಕೆ, ಅಂಬುಲೆನ್ಸ್ ಚಾಲಕ ದಯಾನಂದ, ನಗರಸಭಾ ಸದಸ್ಯ ಜಗನ್ನಿವಾಸ ರಾವ್, ಡಾ.ದೀಪಕ್ ರೈ ನೆರವೇರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಹಿಂಜಾವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ಸುಜಿತ್ ಸಂಟ್ಯಾರ್ ಮತ್ತಿತರರು ಉಪಸ್ಥಿತರಿದ್ದರು.