Recent Posts

Sunday, January 19, 2025
ಕ್ರೀಡೆ

ಕೊರೋನಾ ನಡುವೆಯೂ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿಸುದ್ದಿ: ರೆಡಿಯಾಯ್ತು ವೇಳಾಪಟ್ಟಿ, ಸೆಪ್ಟಂಬರ್ 26 ರಿಂದ ಐಪಿಎಲ್..?-ಕಹಳೆ ನ್ಯೂಸ್

ನವದೆಹಲಿ: ಕೊರೋನಾ ನಡುವೆಯೂ ಐಪಿಎಲ್ ಆಯೋಜನೆಗೆ ಬಿಸಿಸಿಐ ತಯಾರಿ ನಡೆಸಿದೆ. ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು ಸೆಪ್ಟೆಂಬರ್ 26 ರಿಂದ ನವೆಂಬರ್ 7 ರವರೆಗೆ ಯುಎಇನಲ್ಲಿ ಈ ವರ್ಷದ ಐಪಿಎಲ್ ಟೂರ್ನಿ ನಡೆಸಲಾಗುವುದು.

ಇದಕ್ಕಾಗಿ ತಾತ್ಕಾಲಿಕ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಅಕ್ಟೋಬರ್ 18 ರಿಂದ ನವೆಂಬರ್ 15ರ ವರೆಗೆ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಟೂರ್ನಿ ನಡೆಯಲಿದ್ದು ಇದನ್ನು ಮುಂದೂಡುವ ಬಗ್ಗೆ ಐಸಿಸಿ ಅಧಿಕೃತ ಘೋಷಣೆ ಮಾಡಲಿದೆ. ಇದಾದ ನಂತರ ಬಿಸಿಸಿಐ ವತಿಯಿಂದ ಐಪಿಎಲ್ ವೇಳಾಪಟ್ಟಿ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಟಗಾರರು ಮತ್ತು ಸಿಬ್ಬಂದಿ ಯುಎಇಗೆ ತೆರಳಲು, ಅಲ್ಲಿಯೇ ಐಪಿಎಲ್ ಟೂರ್ನಿ ಆಯೋಜಿಸಲು ಅನುಮತಿ ನೀಡುವಂತೆ ಬಿಸಿಸಿಐ ವತಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಯುಎಇನ ದುಬೈ, ಅಬುದಾಭಿ ಮತ್ತು ಶಾರ್ಜಾದಲ್ಲಿ ಪಂದ್ಯಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು