Saturday, November 16, 2024
ದಕ್ಷಿಣ ಕನ್ನಡರಾಜಕೀಯಸುದ್ದಿ

ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದುಬಂದ ಹಿರಿಯ ರಾಜಕೀಯ ಧುರೀಣ ಜನಾರ್ದನ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು, ಜು 20 : ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಜು.೨೦ ರ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ಸೋಂಕಿನ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗೂ ಅವರ ಮನೆಯ ಮೂವರು ಸದಸ್ಯರು ಜು.4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು

ಜಾಹೀರಾತು
ಜಾಹೀರಾತು
ಜಾಹೀರಾತು

“ಕೊರೊನಾಗೆ ಯಾರು ಭಯಪಡಬೇಕಾಗಿಲ್ಲ. ಆತ್ಮಸ್ಥೈರ್ಯದಿಂದ ರೋಗವನ್ನು ಎದುರಿಸಬೇಕು. ರೋಗ ನಿರೋಧಕ ಶಕ್ತಿ ವೃದ್ದಿಸಲು ಪೌಷ್ಟಿಕ ಆಹಾರ, ಕಷಾಯ ಸೇವಿಸಿಬೇಕು. ಸಾರ್ವಜನಿಕ ಸ್ಥಳದಲ್ಲಿ ಅಂತರ ಕಾಪಾಡಿ ಮಾಸ್ಕ್ ಧರಿಸಿ ಮುನ್ನೆಚ್ಚರಿಕೆ ವಹಿಸಿ” ಎಂದು ಕೊರೊನಾದ ವಿರುದ್ದ ಹೋರಾಡಿ ಗುಣಮುಖರಾದ ಪೂಜಾರಿ ಸಲಹೆ ನೀಡಿದ್ದಾರೆ.

“ನಮ್ಮ ಕ್ಷೇಮಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ, ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗಕ್ಕೂ ಧನ್ಯವಾದ” ಎಂದು ಇದೇ ವೇಳೆ ಹೇಳಿದ್ದಾರೆ.