ಉಡುಪಿ, ಜು 20 : ಜಿಲ್ಲೆಯಲ್ಲಿ ಮತ್ತೆ 99 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1221ಕ್ಕೆ ಏರಿಕೆಯಾಗಿದೆ.
ಅಲ್ಲದೆ, ಮತ್ತೆ 22 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 560 ಮಂದಿಯ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಇಂದು 251 ಮಂದಿಯ ವರದಿ ನೆಗೆಟಿವ್ ಆಗಿದೆ. ಜಿಲ್ಲೆಯಲ್ಲಿ 661 ಮಂದಿ ಸದ್ಯ ಚಿಕಿತ್ಸೆಯಲ್ಲಿದ್ದಾರೆ.