Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 89 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ಐವರು ಬಲಿ – ಕಹಳೆ ನ್ಯೂಸ್
ಮಂಗಳೂರು, ಜು 20 : ದ.ಕ. ಜಿಲ್ಲೆಯಲ್ಲಿ ಮತ್ತೆ 89 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3685ಕ್ಕೆ ಏರಿಕೆಯಾಗಿದೆ.
2055 ಮಂದಿ ಮಂದಿ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ 57 ಮಂದಿ ಗುಣಮುಖರಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 1548 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಇನ್ನು ಇಂದು ಪತ್ತೆಯಾದ ಸೋಂಕಿತರ ಪೈಕಿ 11 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 45 ಮಂದಿಯಲ್ಲಿ ಐಎಲ್ ಐ ಪ್ರಕರಣ ದೃಢಪಟ್ಟಿದೆ. 16 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ ಇಬ್ಬರಲ್ಲಿ ಸೊಂಕು ಪತ್ತೆಯಾಗಿದೆ. 15 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 5 ಮಂದಿ ಕೊರೊನಾಕ್ಕೆ ಬಲಿ :
ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 5 ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ.
42, 55, 63 ಹಾಗೂ 65 ವರ್ಷದ ನಾಲ್ವರು ಗಂಡಸರು ಹಾಗೂ ಎರಡು ತಿಂಗಳ ಮಗುವೊಂದು ಕೊರೋನಾಕ್ಕೆ ಬಲಿಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ.