Sunday, January 19, 2025
ಕ್ರೈಮ್ರಾಷ್ಟ್ರೀಯಸುದ್ದಿ

ರಾಜೀವ್ ಗಾಂಧಿ ಹಂತಕಿ ನಳಿನಿ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಚೆನ್ನೈ, ಜು 21 : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯಾಕಾಂಡದ ಪ್ರಮುಖ ಅಪರಾಧಿ ನಳಿನಿ ಶ್ರೀಹರನ್​ ವೆಲ್ಲೂರು ಸೋಮವಾರ ರಾತ್ರಿ ಕಾರಾಗೃಹದಲ್ಲಿಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಳಿನಿ ಪರ ವಕೀಲೆ ಪುಗಳೇಂದಿ ಅವರ ಪ್ರಕಾರ ” ನಳಿನಿ ಮತ್ತು ಕಾರಾಗೃಹದಲ್ಲಿದ್ದ ಇನ್ನೊಬ್ಬ ಅಪರಾಧಿಯ ನಡುವೆ ಜಗಳವಾಗಿದೆ. ಈ ವಿಷಯವನ್ನು ಇತರ ಕೈದಿಗಳು ಜೈಲರ್ ಗೆ ತಿಳಿಸಿದಾಗ ನಳಿನಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ” ಎಂದು ಹೇಳಿದ್ದಾರೆ.

ಮಾತ್ರವಲ್ಲದೆ , ಕಳೆದ 29 ವರ್ಷಗಳಲ್ಲಿ ನಳಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಇದೇ ಮೊದಲ ಬಾರಿ. ಹೀಗಾಗಿ, ಈ ನಿರ್ಧಾರದ ಹಿಂದಿನ ಸ್ಪಷ್ಟ ಕಾರಣವೇನು ಎಂದು ತಿಳಿಯಬೇಕಿದೆ ಎಂದು ಪುಗಳೇಂದಿ ಹೇಳಿದ್ದಾರೆ.

ಇದಲ್ಲದೆ, ನಳಿನಿಯ ಪತಿ ಮುರುಗನ್​ ಸಹ ಇದೇ ಕಾರಾಗೃಹದಲ್ಲಿದ್ದು, ಜೈಲಿನಿಂದ ವಕೀಲರಿಗೆ ಕರೆ ಮಾಡಿ ನಳಿನಿಯನ್ನು ಬೇರೆ ಜೈಲಿಗೆ ವರ್ಗಾಯಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಆದಷ್ಟು ಬೇಗ ಕಾನೂನಿನ ಮೊರೆ ಹೋಗುವುದಾಗಿ ವಕೀಲರು ತಿಳಿಸಿದ್ದಾರೆ.