ದೆಹಲಿ : ದಕ್ಷಿಣ ಭಾರತಕ್ಕೆ ‘ ನಿಮ್ನ ‘ ಹೆಸರಿನ ಚಂಡಮಾರುತ ಬಿರುಬೇಸಿಗೆಯಲ್ಲಿ ಅಪ್ಪಳಿಸಲಿದೆ ಎಂಬ ಮಾಹಿತಿಯನ್ನು ಆಶ್ರೇಲಿಯಾ ಮೂಲದ ಮಾದ್ಯಮವು ಪ್ರಕಟಿಸಿದೆ.
ಜಿಲ್ಲಾಡಳಿತದಿಂದ ಎಚ್ಚರಿಕೆ!
ಅರಬ್ಬೀ ಸಮುದ್ರ ತೀರದಲ್ಲಿ ತೀವ್ರ ಕಟ್ಟೆಚ್ಚರ ;
ಕನ್ಯಾಕುಮಾರಿಯಿಂದ ಕಲ್ಲಿಕೋಟೆಯವರೆಗಿನ ಕರಾವಳಿ ತೀರದ ಸಮುದ್ರದಲ್ಲಿ ‘ನಿಮ್ನ’ ಒತ್ತಡ ಉಂಟಾಗಿದ್ದು, ಸಮುದ್ರ ಅಲೆಗಳ ಎತ್ತರ ಏರಿಕೆ ಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮುದ್ರ ತೀರ ಪ್ರದೇಶದಲ್ಲಿ ಮೀನುಗಾರಿಕೆಗೆ ತೆರಳದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಸೂಚನೆ ನೀಡಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಕೇರಳದಲ್ಲಿ ಮುಂದಿನ 48 ಗಂಟೆಗಳಲ್ಲಿ ಸಮುದ್ರ ತೀರದಲ್ಲಿ ಗಂಟೆಗೆ 60 ಕಿ.ಮೀ. ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಮೀನುಗಾರಿಕೆಗೆ ತೆರಳಿರುವವರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮುಂದಿನ 72 ಗಂಟೆಗಳಲ್ಲಿ ಕೇರಳ ಕರಾವಳಿ ತೀರದಲ್ಲಿ 2.5 ರಿಂದ 3.2 ಮೀಟರ್ ವರೆಗೆ ಸಮುದ್ರ ಅಲೆಗಳು ಏರಿಕೆಯಾಗಲಿದೆ. ಕರಾವಳಿ ಹಾಗೂ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಇದೆ.
ವರದಿ : ಕಹಳೆ ನ್ಯೂಸ್