Sunday, January 19, 2025
ರಾಜಕೀಯರಾಜ್ಯ

Breaking News : ನಾಳೆಯಿಂದ ರಾಜ್ಯದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಇಲ್ಲ ; ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್‌ಡೌನ್‌ ಒಂದೇ ಪರಿಹಾರವಲ್ಲ, ಸಾಮಾಜಿಕ ಅಂತರ ಮತ್ತು ಮಾಸ್ಕ್‌ ಧರಿಸುವ ಮೂಲಕ ಕೊರೊನಾ ನಿಯಂತ್ರಿಸಲು ಜನರು ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದೆಲ್ಲೆಡೆ ಕರೊನಾ ವೈರಸ್​ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್​ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂಡು ಹಾಗೂ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುವುದೇನೆಂದರೆ, ಇದನ್ನು ತೊಲಗಿಸಲು ಲಾಕ್​ಡೌನ್​ ಒಂದೇ ಪರಿಹಾರವಲ್ಲ. ಜನರು ಕೋವಿಡ್​ ತೊಲಗಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮಾಸ್ಕ್​ಗಳನ್ನು ಪ್ರತಿಯೊಬ್ಬರು ಧರಿಸಬೇಕು ಎಂದು ಮನವಿ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲರೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ನೀವು ಎಷ್ಟರಮಟ್ಟಿಗೆ ಕಟ್ಟುನಿಟ್ಟಾಗಿ ಪಾಲನೇ ಮಾಡ್ತಿರೋ ಅಷ್ಟರಮಟ್ಟಿಗೆ ಕೋವಿಡ್​ ತಡೆಯಲು ನಮ್ಮಿಂದ ಸಾಧ್ಯ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾಳೆಯಿಂದ ಬೆಂಗಳೂರಿನಲ್ಲಿ ಲಾಕ್‌ಡೌನ್‌ ಇರುವುದಿಲ್ಲ. ಜನರ ರಕ್ಷಣೆಯ ಜೊತೆ ಸರ್ಕಾರಕ್ಕೆ ಆರ್ಥಿಕ ಸಂಪನ್ಮೂಲ ಅಗತ್ಯವಿದೆ. ಹೀಗಾಗಿ ಬೆಂಗಳೂರು ಮಾತ್ರ ಅಲ್ಲ ರಾಜ್ಯದ ಎಲ್ಲೂ ಲಾಕ್‌ಡೌನ್‌ ಮಾಡುವುದಿಲ್ಲ. ಆದರೆ ಕಂಟೈನ್ಮೆಂಟ್‌ ವಲಯದಲ್ಲಿ ನಿಯಮ ಬಿಗಿ ಇರುತ್ತದೆ ಎಂದು ಸ್ಪಷ್ಟಪಡಿಸಿದರು.

ಎಲ್ಲೇ ಹೋದರೂ ಮಾಸ್ಕ್‌ ಧರಿಸುವ ಬಿಗಿ ನಿಲುವನ್ನು ತೆಗೆದುಕೊಳ್ಳಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಜೀವ ಉಳಿಸೋಣ ಎಂದು ವಿನಂತಿಸಿಕೊಂಡರು.

ಆರಂಭದಲ್ಲಿ ಕೊರೊನಾ ನಿಯಂತ್ರಣದಲ್ಲಿ ರಾಜ್ಯ ಮುಂಚೂಣಿಯಲ್ಲಿತ್ತು. ಆದರೆ ಲಾಕ್‌ಡೌನ್‌ ತೆರವಾದ ನಂತರ ಮಹಾರಾಷ್ಟ್ರ, ತಮಿಳುನಾಡು ಬೇರೆ ರಾಜ್ಯಗಳಿಂದ ಜನ ಬಂದ ಬಳಿಕ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಈಗ ನಿಯಂತ್ರಣ ಮಾಡಲು ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಪೊಲೀಸರು ಬಹಳ ಕಷ್ಟಪಡುತ್ತಿದ್ದಾರೆ. ಮನೆಯಿಂದ ಹೊರಗಡೆ ಬಂದಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಮಾಸ್ಕ್‌ ಧರಿಸದೇ ಇದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.