Sunday, January 19, 2025
ಬಳ್ಳಾರಿರಾಜ್ಯಸುದ್ದಿ

ಹೋಂ ಕ್ವಾರಂಟೈನ್ ಆದ ಬಳ್ಳಾರಿ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಬಳ್ಳಾರಿ: ತಮ್ಮ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದರಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇದೀಗ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

ಹೌದು. ಎಸ್.ಎಸ್ ನಕುಲ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಒಬ್ಬರಲ್ಲಿ ಕರೋನಾ ಸೋಂಕು ಇರುವುದು ದೃಢವಾಗಿದೆ. ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಜಿಲ್ಲಾಧಿಕಾರಿ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿಸಿಯವರ ನಿವಾಸದ ಎದುರು ಅಧಿಕಾರಿಗಳು ಹೋಂ ಕ್ವಾರಂಟೈನ್ ಬೋರ್ಡ್ ಹಾಕಿದ್ದಾರೆ. ಮಂಗಳವಾರದಿಂದ ಶನಿವಾರದವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇರಲಿದ್ದು, ಮನೆಯಿಂದಲೇ ಕೆಲಸ ಮಾಡೋದಾಗಿ ಡಿಸಿ ನಕುಲ್ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜೊತೆಗೆ ಮನೆಯಲ್ಲಿ ಎಲ್ಲರೂ ಆರಾಮಾಗಿ ಇದ್ದಾರೆ. ವಿನಾಕಾರಣ ಗೊಂದಲ ಮಾಡಬೇಡಿ ಎಂದು ಮನವಿ ಕೂಡ ಮಾಡಿಕೊಂಡಿದ್ದಾರೆ.