Thursday, April 3, 2025
ಸುದ್ದಿ

ಸೆಪ್ಟೆಂಬರ್ 5 ರಿಂದ ಶಾಲೆಗಳು ಆರಂಭ : ಸರ್ಕಾರದಿಂದ ಮಹತ್ವದ ತೀರ್ಮಾನ- ಕಹಳೆ ನ್ಯೂಸ್

ಅಮರಾವತಿ : ಕೊರೊನಾ ವೈರಸ್ ಭೀತಿಯ ನಡುವೆಯೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ಆಂಧ್ರ ಪ್ರದೇಶ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಆಂಧ್ರಪ್ರದೇಶ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಸೆಪ್ಟೆಂಬರ್ 5 ರಿಂದ ಶಾಲೆಗಳನ್ನು ಆರಂಭಿಸಲಾಗುವುದು, ಶಾಲೆಗಳು ಆರಂಭವಾಗುವ ತನಕ ಮಧ್ಯಾಹ್ನದ ಬಿಸಿಯೂಟ ಯೋಜನೆ ದಿನಸಿ ಪದಾರ್ಥಗಳನ್ನು ಮಕ್ಕಳ ಮನೆಗೆ ತಲುಪಿಸಬೇಕಾಗುತ್ತದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಎಲ್ ಕೆಜಿ ಮತ್ತು ಯುಕೆಜಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗುತ್ತದೆ ಎಂದು ಹೇಳಿದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ