Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 218 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಏಳು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 218 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ 162 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ನಿನ್ನೆ ಐದು ಮಂದಿ ಸಾವನ್ನಪ್ಪಿದ್ದರು. ಆದರೆ, ಇಂದು‌ ಏಳು ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಏಳು ಕೊರೋನಾ‌ದಿಂದ ಸಾವು :

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಏಳು ಕೊರೋನಾ‌ದಿಂದ ಸಾವನ್ನಪ್ಪಿದ್ದು, ಓರ್ವ ಮಹಿಳೆ ಹಾಗೂ ಆರು ಗಂಡಸರು ಕೊರೋನಾಗೆ ಬಲಿಯಾಗಿದ್ದಾರೆ.

36, 69, 52, 83, 73 ಹಾಗೂ 52 ವರ್ಷದ ಆರು ಮಂದಿ ಪುರುಷರು ಬಲಿಯಾಗಿದ್ದು, 58 ವರ್ಷದ ಮಹಿಳೆಯೋರ್ವರು ಕೊರೋನಾಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 98+1ಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಸಾವಿನ‌ ಸಂಖ್ಯೆ ಹೆಚ್ಚಾಗುತ್ತಿದೆ.