Sunday, January 19, 2025
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 180 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಎಂಟು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಜು. 24 : ದ.ಕ. ಜಿಲ್ಲೆಯಲ್ಲಿ ಮತ್ತೆ 180 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4394ಕ್ಕೆ ಏರಿಕೆಯಾಗಿದೆ.

ಇನ್ನು ಜಿಲ್ಲೆಯಲ್ಲಿ ಶುಕ್ರವಾರದಂದು 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಒಟ್ಟು 187 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 2300 ಮಂದಿ ಪ್ರಸ್ತುತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಾಥಮಿಕ ಸಂಪರ್ಕದಿಂದ 56ಯಲ್ಲಿ ಸೋಂಕು ಪತ್ತೆಯಾಗಿದೆ. 68 ಮಂದಿಯಲ್ಲಿ ಐಎಲ್ ಐ ಪ್ರಕರಣಗಳು ದೃಢಪಟ್ಟಿದೆ. 10 ಸಾರಿ ಪ್ರಕರಣಗಳು ಪತ್ತೆಯಾಗಿದೆ. 45 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ಅಂತರಾಷ್ಟ್ರೀಯ ಪ್ರಯಾಣದಿಂದ ಬಂದವರಲ್ಲಿ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದೆಡೆ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಸದ್ಯ ಸಾವಿನ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಎಂಟು ಮಂದಿ ಬಲಿ :

ಶುಕ್ರವಾರದಂದು ದ.ಕ. ಜಿಲ್ಲೆಯಲ್ಲಿ ಮತ್ತೆ 8 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.

ಮಂಗಳೂರು ನಿವಾಸಿ 44 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಮಂಗಳೂರು ಮೂಲದ 56 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಮಂಗಳೂರಿನ 67 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಬಂಟ್ವಾಳದ 42 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 67 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮಂಗಳೂರಿನ 75 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಂಗಳೂರು ನಿವಾಸಿ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಪುತ್ತೂರು ನಿವಾಸಿ 61 ವರ್ಷದ ಮಹಿಳೆ ಮೃತಪಟ್ಟ ಬಗ್ಗೆ ವರದಿಯಾಗಿದೆ.