Saturday, November 23, 2024
ಸುದ್ದಿ

ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನ : ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಸೈನಿಕರಿಗೆ ಸೆಲ್ಯೂಟ್-ಕಹಳೆ ನ್ಯೂಸ್

ಭಾರತದ ಮೇಲೆ ದಾಳಿ ನಡೆಸಿದ ಪಾಕಿಸ್ತಾನ ಸೇನೆಯನ್ನು ಮಣಿಸಿ, ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಭಾರತಿಯ ಯೋಧರಿಗೆ ಗೌರವ ನೀಡುವ ಸಲುವಾಗಿ ಇಂದು ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಜುಲೈ 26 ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಸುಮಾರು 60 ದಿನಗಳ ಕಾಲ ನಡೆದ ಕಾರ್ಗಿಲ್ ಕದನದಲ್ಲಿ ಪಾಕಿಸ್ತಾನವನ್ನು ಮಣಿಸಿ ದೇಶವನ್ನು ರಕ್ಷಿಸಿ ಸುಮಾರು ೫೦೦ ಕ್ಕೂ ಹೆಚ್ಚು ಸೈನಿಕರು ಪ್ರಾಣತ್ಯಾಗ ಮಾಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಂದು 1999ರ ಮೇ ಮತ್ತು ಜುಲೈನ 2 ತಿಂಗಳುಗಳ ನಡುವೆ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಯುದ್ಧವೇ ಕಾರ್ಗಿಲ್ ಯುದ್ಧ. ಈ ಯುದ್ಧದಲ್ಲಿ ಪಾಕಿಸ್ತಾನದ ಸೈನಿಕರು ಅಕ್ರಮವಾಗಿ ಕಾಶ್ಮೀರದ ಕಾರ್ಗಿಲ್ ಸೇರಿದಂತೆ ಬಹುತೇಕ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಭಾಗಗಳನ್ನು ಆಕ್ರಮಿಸಿಕೊಂಡಿದ್ದರು. ಪಾಕ್ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ವೀರ ಸೈನಿಕರು ಪಾಕಿಸ್ತಾನದ ಪಡೆಗಳು ಮತ್ತು ಉಗ್ರಗಾಮಿಗಳು LoCಯಲ್ಲಿ ಆಕ್ರಮಿಸಿಕೊಂಡ ಭಾರತದ ಬಹುತೇಕ ನೆಲೆಗಳನ್ನು ಭಾರತೀಯ ವಾಯು ಪಡೆಯ ಬೆಂಬಲದೊಂದಿಗೆ ಮರುವಶಕ್ಕೆ ತೆಗೆದುಕೊಂಡಿತು. ಅಂತಾರಾಷ್ಟ್ರೀಯವಾಗಿ ರಾಜತಾಂತ್ರಿಕ ವಿರೋಧ ವ್ಯಕ್ತವಾಗಿದ್ದರಿಂದಾಗಿ, ಪಾಕಿಸ್ತಾನದ ಪಡೆಗಳು LOCಯ ಭಾರತದ ನೆಲೆಗಳಿಂದ ಬಲವಂತವಾಗಿ ಹಿಂದಕ್ಕೆ ಸರಿಯಬೇಕಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಯುದ್ಧ ಜುಲೈ ೨೬ ರಂದು ಕೊನೆಗೊಂಡಿದ್ದು, ಪಾಕಿಸ್ತಾನ ಭಾರತಕ್ಕೆ ಸಂಪೂರ್ಣವಾಗಿ ಶರಣಾಗಿತ್ತು. ಇದೆ ದಿವಸವನ್ನು ಸೈನಿಕರ ತ್ಯಾಗ, ಬಲಿದಾನದ ಹಿನ್ನೆಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಎಂದು ಕರೆಯಲಾಗುತ್ತದೆ.