Thursday, January 23, 2025
ಉಡುಪಿ

ಉಡುಪಿ ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಪಾಸಿಟಿವ್-ಕಹಳೆ ನ್ಯೂಸ್

ಉಡುಪಿ, ಜು.26: ಜಿಲ್ಲೆಯಲ್ಲಿ ರವಿವಾರ 169 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಅಲ್ಲದೇ ದಿನದಲ್ಲಿ 706 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ರವಿವಾರ ಕೊರೋನ ಸೋಂಕು ಪತ್ತೆಯಾದ 169 ಮಂದಿಯಲ್ಲಿ ಉಡುಪಿ ತಾಲೂಕಿನ 86 ಮಂದಿ, ಕುಂದಾಪುರ ತಾಲೂಕಿನ 31 ಮಂದಿ ಹಾಗೂ ಕಾರ್ಕಳ ತಾಲೂಕಿನ 52 ಮಂದಿ ಸೇರಿದ್ದಾರೆ. 89 ಮಂದಿ ಪುರುಷರು, 63 ಮಂದಿ ಮಹಿಳೆಯರು ಹಾಗೂ 10 ವರ್ಷದೊಳಗಿನ ಪ್ರಾಯದ 11 ಬಾಲಕರು ಹಾಗೂ ಆರು ಮಂದಿ ಬಾಲಕಿಯರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಇಂದಿನ 169 ಪಾಸಿಟಿವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಸಂಖ್ಯೆ 3387ಕ್ಕೇರಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು