Recent Posts

Sunday, January 19, 2025
ದಕ್ಷಿಣ ಕನ್ನಡಸುದ್ದಿ

ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟ, ವಧೆ ವಿರುದ್ದ ಕಠಿಣ ಕ್ರಮ ; ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಖಡಕ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 28 : ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪಶುಪಾಲನಾ ಇಲಾಖೆಯವರಿಗೆ ಸೂಚಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಜಾನುವಾರು ಸಾಗಾಣಿಕೆಗೆ ಪರವಾನಿಗೆ ನೀಡಬಹುದಾಗಿದ್ದು, ಈ ಬಗ್ಗೆ ಗಮನಹರಿಸಲು ಅವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮವಾಗಿ ಗೋವು/ಕರುಗಳು, ಒಂಟೆಗಳು ಮತ್ತು ಇತರೆ ಜಾನುವಾರುಗಳ ಸಾಗಾಣಿಕೆ ಮತ್ತು ವಧೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿ ಹಸು/ಕರುಗಳು, ಒಂಟೆಗಳು ಮತ್ತು ಇತರೆ ಜಾನುವಾರುಗಳನ್ನು ಸಾಗಾಣಿಕೆ ಅಥವಾ ವಧೆ ಮಾಡುವಂತಿಲ್ಲ. ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಹಾಗೂ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದರು.

ಅಕ್ರಮವಾಗಿ ಅಥವಾ ಅನಧಿಕೃತವಾಗಿ ಜಾನುವಾರುಗಳನ್ನು ಸಾಗಾಣಿಕೆ ಮಾಡುವ ಸಂಧರ್ಭದಲ್ಲಿ ಸಾರ್ವಜನಿಕರು ಕಾನೂನನ್ನು ಕೈಗೆತ್ತಿಕೊಳ್ಳದೆ ಸಂಬಂಧಪಟ್ಟ ಪೋಲಿಸ್ ಠಾಣೆಗೆ ಮಾಹಿತಿ ನೀಡಬೇಕು. ಸಾರ್ವಜನಿಕರು ಕಾನೂನ್ನು ಉಲ್ಲಂಘಿಸಿ ಜಾನುವಾರು ಸಾಗಾಣಿಕೆ ಮಾಡುವ ವಾಹನ ಅಥವಾ ಜನರ ಮೇಲೆ ಹಲ್ಲೆ ನಡೆಸಿದ್ದಲ್ಲಿ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಕೊವೀಡ್ ಸಮಯದಲ್ಲಿ ಮನೆಯಲ್ಲೇ ಪ್ರಾರ್ಥನೆ ಮಾಡಿ:
ಕೋವಿಡ್ ಸಮಯದಲ್ಲಿ ಪ್ರಾರ್ಥನಾ ಮಂದಿರಗಳಲ್ಲಿ ಹೆಚ್ಚಿನ ಜನರು ಸೇರದಂತೆ ನಿಗಾವಹಿಸಿ, ಆದಷ್ಟು ಮನೆಯಲ್ಲಿಯೇ ಪ್ರಾರ್ಥನೆಯನ್ನು ಸಲ್ಲಿಸಲು ಪ್ರತಿ ಠಾಣೆಯ ವ್ಯಾಪ್ತಿಯಲ್ಲಿ ಶಾಂತಿ ಸಭೆಯನ್ನು ಏರ್ಪಡಿಸಿ ಜನರನ್ನು ಮನವೊಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಬಕ್ರೀದ್ ಸಂದರ್ಭದಲ್ಲಿ ಪ್ರಮುಖ ಪ್ರಾರ್ಥನಾ ಮಂದಿರಗಳಲ್ಲಿ ಸೂಕ್ತ ಬ್ಯಾರಿಕೇಡ್‍ಗಳನ್ನು ಮಹಾನಗರಪಾಲಿಕೆ, ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಮೂಲಕ ಮಾಡುವಂತೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತು, ವಾಹನಗಳ ಸುಗಮ ಸಂಚಾರ ಮತ್ತು ವಾಹನಗಳ ನಿಲುಗಡೆಗಾಗಿ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಪೋಲಿಸ್ ಇಲಾಖೆಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಇದ್ದರು.