Recent Posts

Friday, November 22, 2024
ದಕ್ಷಿಣ ಕನ್ನಡಪುತ್ತೂರು

ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸಿದ್ದ ಖಡಕ್ ಅಧಿಕಾರಿ ; IAS ಪರೀಕ್ಷೆ ಬರೆದು ದೇಶದಲ್ಲಿ 32 ನೇ ರ್‍ಯಾಂಕ್‌ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದ ಡಾ. ರಾಜೇಂದ್ರ ಕೆ.ವಿ ಇದೀಗ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ.! – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿಯ ಜಿಲ್ಲಾ ಪಂಚಾಯತ್ ಸಿ.ಇ.ಓ ಆಗಿದ್ದ ಡಾ.ರಾಜೇಂದ್ರ ಕೆ.ವಿ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲತಃ ಶಿವಮೊಗ್ಗದ ತೀರ್ಥಹಳ್ಳಿಯವರಾಗಿರುವ ಇವರು ಸಿ.ಇ.ಎಸ್ ಹೈ ಸ್ಕೂಲ್ ಚಳಗೇರಿ ಹಾವೇರಿ ಯಲ್ಲಿ ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಪೂರೈಸಿದ್ದರು. ಜಗದ್ಗುರು ಜಯದೇವ ಮುರುಘರಾಜೇಂದ್ರ ವೈದ್ಯಕೀಯ ಮಹಾವಿದ್ಯಾಲಯ ದಾವಣಗೆರೆಯಲ್ಲಿ ತಮ್ಮ ವೈದ್ಯಕೀಯ ಶಿಕ್ಷಣ ಪೂರೈಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವೈದ್ಯ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಇವರು ನಂತರ ನಾಗರಿಕ ಸೇವೆ ಆಸಕ್ತಿಯಿಂದ ಐಎಎಸ್ ಪರೀಕ್ಷೆ ಬರೆದು ದೇಶದಲ್ಲಿ 32 ನೇ ರ್‍ಯಾಂಕ್‌ ಮತ್ತು ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದ್ದರು.ಅವರು 2013 ಕರ್ನಾಟಕ ಕೆಡೆರ್ ನ ಐಎಸ್ ಅಧಿಕಾರಿಯಾಗಿದ್ದಾರೆ.

ಡಾ. ರಾಜೇಂದ್ರ ಕೆ.ವಿ ಅವರು ಈ ಹಿಂದೆ ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪುತ್ತೂರಿನಲ್ಲಿದ್ದಷ್ಟು ಸಮಯ ಜನಪರ ನಿಲುವಿನಿಂದ , ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಇವರು ಖಡಕ್ ಅಧಿಕಾರಿ ಎಂದೇ ಜನಮೆಚ್ಚುಗೆ ಗಳಿಸಿದ್ದರು.