Recent Posts

Thursday, November 21, 2024
ದಕ್ಷಿಣ ಕನ್ನಡಪುತ್ತೂರುಶಿಕ್ಷಣ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ| ಮಹೇಶ್ ಪ್ರಸನ್ನ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅದೇ ಕಾಲೇಜಿನಲ್ಲಿ ೬ ವರ್ಷಗಳಿಂದ ಕಂಪ್ಯೂಟರ್ ಸೈನ್ಸ್ ವಿಭಾಗ ಮುಖ್ಯಸ್ಥರಾಗಿದ್ದ ಮೂಲತಃ ಪಾಣಾಜೆಯ ಡಾ. ಮಹೇಶ್ ಪ್ರಸನ್ನರವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಈ ಹಿಂದೆ ಪ್ರಾಂಶುಪಾಲರಾಗಿದ್ದ ಡಾ. ಎಂ.ಎಸ್. ಗೋವಿಂದೇ ಗೌಡರ ತೆರವಾದ ಸ್ಥಾನಕ್ಕೆ ಕಾಲೇಜಿನ ಆಡಳಿತ ಮಂಡಳಿ ಡಾ. ಪ್ರಸನ್ನರವರನ್ನು ನಾಮ ನಿರ್ದೇಶಿಸಿದ್ದು, ಅಧಿಕಾರ ಸ್ವೀಕರಿಸಿದ್ದಾರೆ.

ಪಾಣಾಜೆ ಗ್ರಾಮದ ಕುರಿಯತ್ತಡ್ಕ ಗೋಪಾಲಕೃಷ್ಣ ಶಾಸ್ತ್ರಿ ಮತ್ತು ಸುಶೀಲಾ ದಂಪತಿ ಪುತ್ರರಾಗಿರುವ ಇವರು ತನ್ನ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಅಳಿಕೆ ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆಯಲ್ಲಿ ಮಾಡಿದ್ದು, ಪಿಯುಸಿ ಶಿಕ್ಷಣವನ್ನು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮುಗಿಸಿ, ಬಿ.ಇ. ಇಂಜಿನಿಯರಿಂಗ್ ಪದವಿಯನ್ನು ಸುಳ್ಯ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ್ತು ಎಂ.ಟೆಕ್. ಸ್ನಾತಕೋತ್ತರ ಶಿಕ್ಷಣವನ್ನು ಕಾರ್ಕಳ ನಿಟ್ಟೆ ಶಿಕ್ಷಣ ಸಂಸ್ಥೆಯಲ್ಲಿ ಮಾಡಿದ್ದಾರೆ. ಬಳಿಕ ಪಿ.ಎಚ್‌ಡಿ ಪದವಿಯನ್ನು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಎಲೆಕ್ಟ್ರೋನಿಕ್ ಮತ್ತು ಕಮ್ಯುನಿಕೇಶನ್ ವಿಷಯದಲ್ಲಿ ಪಡೆದಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

೬ ವರ್ಷಗಳ ಕಾಲ ಬೆಂಗಳೂರಿನಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕದ ೧೫ ವರ್ಷಗಳಿಂದ ಪ್ರೊಫೆಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತುಮಕೂರಿನ ಸಿದ್ದಗಂಗಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ೩ ವರ್ಷ, ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 7 ವರ್ಷಗಳ ಕಾಲ ಎಲೆಕ್ಟ್ರೋನಿಕ್ಸ್ ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಅಲ್ಲದೆ ವಿಶೇಷವಾಗಿ ಮೈಕ್ರೋಸಾಫ್ಟ್ ಕಂಪೆನಿಯ ‘ಸರ್ಟಿಫೈಡ್ ಸೊಲ್ಯೂಷನ್ ಡೆವಲಪ್ಪರ್’ ಆಗಿಯೂ ಪ್ರಮಾಣೀಕರಿಸಲ್ಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು