Recent Posts

Friday, November 22, 2024
ಬೆಂಗಳೂರುರಾಜಕೀಯರಾಜ್ಯಸುದ್ದಿ

ಓರ್ವ ಕೊರೊನಾ ರೋಗಿಗೆ 5 ಲಕ್ಷ ಬಿಲ್ ; ಖಾಸಗಿ ಆಸ್ಪತ್ರೆ ವಿರುದ್ಧ ಸುಧಾಕರ್ ಕೆಂಡಾಮಂಡಲ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ರೋಗಿಗೆ 5 ಲಕ್ಷ ರೂ. ಬಿಲ್‌ ಮಾಡಿದ ಖಾಸಗಿ ಆಸ್ಪತ್ರೆಯ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೆಂಡಾಮಂಡಲವಾಗಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಹಣ ಲೂಟಿ ಮಾಡುವ ಕೆಲಸ ನಡೆಯುತ್ತಲೇ ಇದೆ. ಕೊರೊನಾ ರೋಗವನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಆಸ್ಪತ್ರೆಗಳು ದುಡ್ಡು ಮಾಡುವ ದಂಧೆಗೆ ಇಳಿದಿವೆ. ಸರ್ಕಾರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದರ ನಿಗದಿ ಮಾಡಿದ್ದರೂ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈಗ ಸುಧಾಕರ್ ಅವರು ಖಾಸಗಿ ಆಸ್ಪತ್ರೆಯ ಕರ್ಮಕಾಂಡದ ಬಗ್ಗೆ ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಖಾಸಗಿ ಆಸ್ಪತ್ರೆಯ ಮೇಲೆ ಕಿಡಿಕಾರಿ ಟ್ವೀಟ್ ಮಾಡಿರುವ ಸುಧಾಕರ್ ಅವರು, ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆ ಆಡಳಿತ ಮಂಡಳಿ, ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂದು ಆ ಖಾಸಗಿ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜೊತೆಗೆ ಇನ್ನೊಂದು ಟ್ವೀಟ್ ಮಾಡಿರುವ ಸುಧಾಕರ್, ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ಎಚ್ಚರಿಕೆ ಮಾಡಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು ಎಂದು ಬರೆದು ಬಿಲ್‌ ಫೋಟೋ ಅಪ್ಲೋಡ್‌ ಮಾಡಿದ್ದಾರೆ.