Sunday, January 19, 2025
ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ–ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, ” ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ – ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.