Saturday, November 23, 2024
ಸುದ್ದಿ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ – ಕಹಳೆ ನ್ಯೂಸ್

Govt Jobs - kahale news

ಬೆಂಗಳೂರು: ಸರ್ಕಾರಿ ಕೆಲಸಕ್ಕೆ ಸೇರಲು ವಯೋಮಿತಿ ಮುಗಿದೋಯ್ತು. ಅರ್ಜಿ ಹಾಕಲು ಅವಕಾಶವಿಲ್ಲ ಎಂದುಕೊಂಡವರಿಗೆ ಸಿಹಿ ಸುದ್ದಿ ಇಲ್ಲಿದೆ. ಉದ್ಯೋಗ ನೇಮಕಾತಿ ವಯೋಮಿತಿ ಸಡಿಲಿಕೆ ಮಾಡಲು ಸರ್ಕಾರ ಚಿಂತಿಸಿದೆ.

ಸಾಮಾನ್ಯ ವರ್ಗದವರಿಗೆ 35 ವರ್ಷದಿಂದ 37 ವರ್ಷ, ಹಿಂದುಳಿದ ವರ್ಗದವರಿಗೆ 38 ವರ್ಷದಿಂದ 40 ವರ್ಷ, ಎಸ್.ಸಿ., ಎಸ್.ಟಿ. ವರ್ಗದವರಿಗೆ 40 ರಿಂದ 42 ವರ್ಷಕ್ಕೆ ವಯೋಮಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಗಳು 3 -4 ವರ್ಷಗಳಿಂದ ಅಂತಿಮಗೊಳ್ಳದ ಕಾರಣ, ನೇಮಕಾತಿ ವಯೋಮಿತಿ ಸಡಿಲಿಕೆ ಮಾಡಬೇಕೆಂಬ ಒತ್ತಡ ಕೇಳಿ ಬಂದಿತ್ತು. ಈ ಕುರಿತು ನೇಮಿಸಲಾಗಿದ್ದ ಸಂಪುಟ ಉಪ ಸಮಿತಿ ಕೂಡ ತಾತ್ವಿಕ ಒಪ್ಪಿಗೆ ನೀಡಿದೆ. ವಿಧಾನಪರಿಷತ್ ನಲ್ಲೂ ಚರ್ಚೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚುನಾವಣೆ ಸಮೀಪದಲ್ಲಿರುವುದರಿಂದ ಎಲ್ಲಾ ವರ್ಗದವರ ಮನಗೆಲ್ಲಲು ಮುಂದಾಗಿರುವ ರಾಜ್ಯ ಸರ್ಕಾರ, ಸರ್ಕಾರಿ ಉದ್ಯೋಗದ ನೇಮಕಾತಿ ವಯೋಮಿತಿಯನ್ನು ಸಡಿಲಿಕೆ ಮಾಡಲು ಚಿಂತಿಸಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ.