Recent Posts

Sunday, January 19, 2025
ಉಡುಪಿದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ 139 ;ಉಡುಪಿಯಲ್ಲಿ ಮತ್ತೆ 136 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಇಂದು 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ.

ಇನ್ನು ಶನಿವಾರ 6 ಕೊರೊನಾ ಸಾವುಗಳು ವರದಿಯಾಗಿದ್ದು ಜಿಲ್ಲೆಯಲ್ಲಿ ಈವರೆಗೆ 159 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 54 ಮಂದಿ ಗುಣಮುಖರಾಗಿದ್ದು ಈವರೆಗೆ 2685 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 3008 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಮಂಗಳೂರಿನಲ್ಲಿ 91, ಬಂಟ್ವಾಳದಲ್ಲಿ 19, ಬೆಳ್ತಂಗಡಿಯಲ್ಲಿ 14, ಪುತ್ತೂರಿನಲ್ಲಿ 9, ಹಾಗೂ ಬೇರೆ ಜಿಲ್ಲೆಯ ಆರು ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿಯಲ್ಲಿ  136 ಮಂದಿಯಲ್ಲಿ ಕೊರೊನಾ ಸೋಂಕು:-

ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಶನಿವಾರ 136 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4492 ಕ್ಕೆ ಏರಿಕೆಯಾಗಿದೆ.ಶನಿವಾರ ಲಭಿಸಿದ ವರದಿಯಲ್ಲಿ 136 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು 716 ವರದಿ ನೆಗೆಟಿವ್‌ ಆಗಿದೆ. ಇನ್ನು ಕೂಡಾ 446 ವರದಿಗಳು ಲಭಿಸಬೇಕಾಗಿದೆ.

ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 35 ಮಂದಿ ಬಲಿಯಾಗಿದ್ದಾರೆ. ಹಾಗೆಯೇ 2646 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.