Monday, March 31, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರಿ, ಕಾವೇರಿ ನಿವಾಸದ ಆರು ಮಂದಿ ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು, ಆ 03 : ಸಿಎಂ ಬಿಎಸ್‌‌ವೈ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ, ಸಿಎಂ ಅವರ ಕಾವೇರಿ ಮತ್ತು ಕೃಷ್ಣಾ ನಿವಾಸಗಳ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಕಾವೇರಿ ನಿವಾಸದ ಆರು ಮಂದಿಗೆ ಕೊರೊನಾ ಸೋಂಕು ಖಚಿತವಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ತಪಾಸಣೆಯ ಸಂದರ್ಭ ಸಿಎಂ ಅವರ ಕಾವೇರಿ ನಿವಾಸದಲ್ಲಿದ್ದ ಬಾಣಸಿಗ ಮಹಿಳೆ ಸೇರಿ ಗನ್‌‌ ಮ್ಯಾನ್‌‌‌, ವಿಶೇಷ ಕರ್ತವ್ಯಾಧಿಕಾರಿ ಹಾಗೂ ಆರು ಮಂದಿಗೆ ಸೋಂಕು ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಮಗೆ ಕೊರೊನಾ ಸೋಂಕು ತಗುಲಿರುವುದನ್ನು ದೃಡಪಡಿಸಿದ್ದ ಅವರು, ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆಯ ಕ್ರಮವಾಗಿ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್‌‌‌ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು  ಟ್ವೀಟ್‌ ಮೂಲಕ ಮನವಿ ಮಾಡಿದ್ದರು.

ಇನ್ನು ಭಾನುವಾರ ನಡೆದ ಕೊರೊನಾ ಪರೀಕ್ಷೆಯಲ್ಲಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರಿ ಪದ್ಮಾವತಿ ಅವರಿಗೆ ಸೋಂಕು ದೃಢವಾಗಿದ್ದು, ಪುತ್ರ ವಿಜಯೇಂದ್ರ ಅವರಿಗೆ ನೆಗೆಟಿವ್‌‌‌ ಬಂದಿತ್ತು.

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ