Sunday, January 19, 2025
ಕೊಡಗು

ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆ: ಮತ್ತೆ ಪ್ರವಾಹ ಭೀತಿ, ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ ನದಿ-ಕಹಳೆ ನ್ಯೂಸ್

ಕೊಡಗು: ಕಾಫಿ ನಾಡು ಕೊಡಗಿನಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕೊಡಗು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತೀವ್ರ ಮಳೆಯಿಂದ ಪ್ರವಾಹ ಪರಿಸ್ಥಿತಿ ಎದುರಾಗಿದ್ದು ಹಲವು ಕಡೆಗಳಲ್ಲಿ ನೀರು ನಿಂತು ಜನ, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಭಾಗಮಂಡಲದ ತ್ರಿವೇಣಿ ಸಂಗಮ ತುಂಬಿ ಹರಿಯುತ್ತಿದೆ. ಕಾವೇರಿ ನದಿ ಕುಡಿಗೆ ಬಳಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇನ್ನೊಂದೆಡೆ ಹಾಸನ ಜಿಲ್ಲೆಯ ಹೇಮಾವತಿ ನದಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಎಂದು ಕೇಂದ್ರ ಜಲ ಆಯೋಗ ಎಚ್ಚರಿಕೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಡಗು ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿದ ಅಪಾಯದ ಮುನ್ಸೂಚನೆಯು ದೊರೆತಿದ್ದು ಕಳೆದ ಬಾರಿಯಂತೆ ಹಾನಿ ಉಂಟಾಗುವ ಮುನ್ನವೇ ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿರೋಧ ಪಕ್ಷ ಕಾಂಗ್ರೆಸ್ ಆಗ್ರಹಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದ ವಿವಿಧೆಡೆ ಉತ್ತಮ ಮಳೆಯಾಗುತ್ತಿರುವುದರಿಂದ ಹಲವೆಡೆ ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಕರಾವಳಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಮತ್ತು ಉತ್ತರ ಕರ್ನಾಟಕದಲ್ಲೂ ವ್ಯಾಪಕ ಮಳೆಯಾಗುತ್ತಿದೆ. ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಚಾರ್ಮುಡಿ ಘಾಟ್‌ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರ ಸ್ಥಗಿತಗೊಂಡಿದೆ. ಕಬಿನಿ ಜಲಾಶಯದಿಂದ ೫೦ ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ.

೨. ಇದೇ ೧೦ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.