Sunday, January 19, 2025
ಮಡಿಕೇರಿ

ತಲಕಾವೇರಿಯಲ್ಲಿ ಭಾರಿ ಭೂಕುಸಿತ : ಪ್ರಧಾನ ಅರ್ಚಕರ ಕುಟುಂಬವೇ ನಾಪತ್ತೆ-ಕಹಳೆ ನ್ಯೂಸ್

ಮಡಿಕೇರಿ: ಮಡಿಕೇರಿಯಲ್ಲಿ ಕಳೆದ ಹಲವು ದಿನಗಳಿಂದಾ ಭಾರಿ ಮಳೆಯಾಗುತ್ತಿದ್ದು, ಕಳೆದ ಬಾರಿಯಂತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದೀಗ ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್, ಅವರ ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ನಾಪತ್ತೆಯಾಗಿದ್ದಾರೆ.

ತಲಕಾವೇರಿ ಪುಣ್ಯ ಕ್ಷೇತ್ರ ಬಳಿಯಲ್ಲಿ ಭೂಕುಸಿತದಿಂದಾಗಿ ಎರಡು ಮನೆಗಳು ಸಂಪೂಣ೯ ಮಣ್ಣುಪಾಲಾಗಿವೆ, ಮಣ್ಣಿನಡಿ ಸಿಲುಕಿರುವವರ ರಕ್ಷಣೆಗೆ ಸ್ಥಳೀಯರೊಂದಿಗೆ ವಿಪತ್ತು ನಿರ್ವಹಣಾ ಪಡೆ ಕೂಡ ಕಾಯಾ೯ಚರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುಮಾರು 6 ಕಿ.ಮೀ. ಉದ್ದಕ್ಕೆ ಬೆಟ್ಟಸಾಲು ಕುಸಿದು ಸಂಭವಿಸಿದ ಈ ದುರಂತದಲ್ಲಿ ಎರಡು ಕಾರು, 20 ಕ್ಕೂ ಹೆಚ್ಚು ಹಸುಗಳು ಕಾಣೆಯಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು