Saturday, April 5, 2025
ರಾಜ್ಯಶಿಕ್ಷಣ

Breaking News : ಆ.10ರಂದು SSLC ಫಲಿತಾಂಶ ಪ್ರಕಟ ; ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ನಡೆದಿದ್ದಂತ ರಾಜ್ಯದ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ, ಆಗಸ್ಟ್ 10ರಂದು ರಾಜ್ಯದಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ. karresults.nic.in ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಎಸ್ ಎಂ ಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಂದಹಾಗೇ ಕೊರೋನಾ ಸೋಂಕಿನ ಭೀತಿಯ ನಡುವೆಯೂ 8.5 ಲಕ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇಂತಹ ವಿದ್ಯಾರ್ಥಿಗಳ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಆಗಸ್ಟ್ 10ರ ಮಧ್ಯಾಹ್ನ 3ಕ್ಕೆ ನಿರ್ಧಾರವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ