ಅಯೋಧ್ಯೆಯಲ್ಲಿ 2 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.ಆಗಸ್ಟ್ 5ರಂದು ರಾಮ ಜನ್ಮಭೂಮಿಯಾದ ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆಯು ಯಶಸ್ವಿಯಾಗಿ ನಡೆದ ಹಿನ್ನೆಲೆ ಸಿಎಂ ಬಿಎಸ್ವೈ ಅವರು ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದು ಅಭಿನಂದನೆ ತಿಳಿಸಿದ್ದಾರೆ.
ರಾಮಮಂದಿರ ಭೂಮಿಪೂಜೆ ಯಶಸ್ವಿಯಾದ ಹಿನ್ನೆಲೆ ಪತ್ರದಲ್ಲಿ ಅಭಿನಂದನೆ ಸಲ್ಲಿಸುವುದರೊಂದಿಗೆ ಅಯೋಧ್ಯೆಯಲ್ಲಿ 2 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕದಿಂದ ಅಯೋಧ್ಯೆಗೆ ಹಲವಾರು ಮಂದಿ ಹೋಗುತ್ತಾರೆ. ಈ ಹಿನ್ನೆಲೆ ಅಯೋಧ್ಯೆಯಲ್ಲಿ ಕರ್ನಾಟಕ ಸರ್ಕಾರ ಯಾತ್ರಿ ನಿವಾಸವೊಂದನ್ನು ನಿಮಾಣ ಮಾಡಬೇಕು ಎನ್ನುವ ಉದ್ದೇಶವಿದೆ. ಈ ವಿಚಾರವಾಗಿ ಸರ್ಕಾರ ತಯಾರು ಮಾಡಿಕೊಳ್ಳಲಿದೆ ಎಂದು ಸಿಎಂ ಬಿಎಸ್ವೈ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.