ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡ್ತೀವಿ, ತಾಕತ್ತಿದ್ದರೆ ಬಂಧಿಸಿ : ಸಿಎಂ ಬಿಎಸ್‌ವೈಗೆ ಮುತಾಲಿಕ್ ಓಪನ್ ಚಾಲೆಂಜ್..! – ಕಹಳೆ ನ್ಯೂಸ್
ವಿಜಯಪುರ: ಸಾರ್ವಜನಿಕ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಿಲ್ಲ, ಮನೆಯಲ್ಲಿ ಮಾತ್ರ ಆಚರಣೆ ಮಾಡಬಹುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಆದ್ರೆ, ನಾವು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಓಪನ್ ಚಾಲೆಂಜ್ ಮಾಡಿದ್ದಾರೆ.
ಗಣೇಶ ಹಬ್ಬಕ್ಕೆ ಸರ್ಕಾರ ಸಾಕಷ್ಟು ಮಾರ್ಗಸೂಚಿಗಳನ್ನು ನೀಡಿದ್ದು, ಮನೆಯಲ್ಲಿ ಮಾತ್ರ ಆಚರಣೆ ಮಾಡಬಹುದು, ಸಾರ್ವಜನಿಕ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಕಳೆದ ತಿಂಗಳು ಹೇಳಿದ್ದರು. ಸಧ್ಯ ಸರ್ಕಾರದ ಅದೇಶಕ್ಕೆ ಸೆಡ್ಡು ಹೊಡೆದ ಮುತಾಲಿಕ್ ಬಾರ್, ಮಾಲ್ಗಳನ್ನು ತೆರೆಯಲು ಅವಕಾಶ ಕೊಡುತ್ತಾರೆ.
ಗಣಪತಿಗೆ ಏಕೆ ಅವಕಾಶ ಯಾಕಿಲ್ಲ.? ನಾವು ಕೊರೊನಾ ಹರಡದಂತೆ ಸಾಮಾಜಿಕ ಅಂತರ ಕಾಪಾಡಿಕೊಂಡು ಗಣೇಶ ಚತುರ್ಥಿ ಆಚರಿಸುತ್ತೇವೆ ಎಂದರು.