ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 10ರಂದು ವ್ಯಾಪಕ ಮಳೆಯಾಗಲಿದ್ದು. ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು ನಾಳೆ ಬೆಂಗಳೂರಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗಿದ್ದು, ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದರು.
ಇನ್ನು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಮಾನ್ಸೂನ್ ಚುರುಕಾಗಿದೆ. ಹೊನ್ನಾವರ 14 ಸೆ.ಮೀ ಮಳೆ, ಕುಂದಾಪುರ 11 ಸೆ.ಮೀ ಮಳೆಯಾಗಿದೆ. ಉತ್ತರ ಒಳನಾಡಿನ ಕೆಲವೆಡೆ ಮಾತ್ರ ಮಳೆಯಾಗಿದ್ದು ಮಾನ್ಸೂನ್ ದುರ್ಬಲವಾಗಿದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಕೊಡಗು 17 ಸೆ.ಮೀ, ಆಗುಂಬೆಯಲ್ಲಿ 9 ಸೆ.ಮೀ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 13ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದರು.