Sunday, January 19, 2025
ರಾಜ್ಯ

ರಾಜ್ಯದಲ್ಲಿ ಭಾರಿ ಮಳೆ -ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ-ಕಹಳೆ ನ್ಯೂಸ್

ಕರಾವಳಿ ಹಾಗು ಮಲೆನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಇದು ಆ.13ರವರೆಗೂ ಮುಂದುವರೆಯಲಿದೆ ಎನ್ನಲಾಗಿದೆ.

ಆಗಸ್ಟ್ 11ರಂದು ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗುವ ಲಕ್ಷಣವಿರುವುದರಿಂದ ಆರೆಂಜ್ ಅಲರ್ಟ್ ಹಾಗು ಆಗಸ್ಟ್ 12 ಮತ್ತು 13ರಂದು ಕಡಿಮೆ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಮತ್ತು ಕಾರವಾರದ ಸಮುದ್ರದಲ್ಲಿ ಸುಮಾರು 4 ಮೀಟರ್ ನಷ್ಟು ಎತ್ತರದ ಅಲೆಗಳು ಕಂಡು ಬರಲಿವೆ. ಗಾಳಿಯ ವೇಗ ಗಂಟೆಗೆ 50-60 ಕಿಮೀ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ದುರ್ಬಲವಾಗುವುದರಿಂದ ಆ.10 ಮತ್ತು 11ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೊಡಗಿನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಮೈಸೂರಿನ ಕೆ ಆರ್ ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಅಣೆಕಟ್ಟೆಯಿಂದಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡಲಾಗಿದೆ. ಅಲ್ಲದೆ, ನದಿ ಪಾತ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸ್ಥಳಕ್ಕೆ ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.

ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿಧಾಮ, ವೆಲ್ಲಿಸ್ಲಿ ಸೇತುವೆ. ಸಂಗಮ, ಗೋಸಾಯಿ ಘಾಟ್, ಮುತ್ತತ್ತಿ ಸೇರಿದಂತೆ ನದಿ ಹರಿಯುವ ಪ್ರಮುಖ ಹಾಟ್ ಸ್ಪಾಟ್ ಗಳಲ್ಲಿ ಮುಂಜಾಗ್ರತೆಯಾಗಿ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ.

ನದಿ ಪಾತ್ರಗಳಲ್ಲಿ ಪೊಲೀಸರು ಗಸ್ತು ತಿರುಗುವ ಮೂಲಕ ನದಿಗೆ ಇಳಿಯುವವರ ಮೇಲೆ ಹದ್ದಿನ ಕಣ್ಣಿಡಸು ಸೂಚಿಸಲಾಗಿದೆ.