Sunday, January 19, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೊರೋನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು : ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಿಎಂ ಯಡಿಯೂರಪ್ಪ ಗುಣಮುಖರಾದಂತ ಹಿನ್ನಲೆಯಲ್ಲಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಕೊರೋನಾವನ್ನು ಗೆದ್ದು ಬಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೋನಾದಿಂದ ಗುಣಮುಖರಾದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು, ಮಣಿಪಾಲ್ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು ಪುಷ್ಪಗುಚ್ಛ ನೀಡುವ ಮೂಲಕ, ಆತ್ಮೀಯವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿತು. ಆದ್ರೇ ಇನ್ನೂ ಎರಡು ದಿನಗಳ ಕಾಲ ಸಿಎಂ ಯಡಿಯೂರಪ್ಪ ಅವರು ಮನೆಯಲ್ಲಿಯೇ ವಿಶ್ರಾಂತಿ ಪಡೆಯಲಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು