Sunday, January 19, 2025
ರಾಷ್ಟ್ರೀಯಸುದ್ದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೆ ಕೋವಿಡ್ 19 ದೃಢ – ಕಹಳೆ ನ್ಯೂಸ್

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ. ಮುಖರ್ಜಿ ಅವರು 2012ರಿಂದ 2017ರವರೆಗೆ ರಾಷ್ಟ್ರಪತಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

ಕೋವಿಡ್ 19 ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖರ್ಜಿ, ಕಳೆದ ವಾರ ಯಾರೆಲ್ಲಾ ತನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಸ್ವಯಂ ಐಸೋಲೇಶನ್ ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೇಶಾದ್ಯಂತ ಕೋವಿಡ್ 19 ವೈರಸ್ ಹರಡುತ್ತಿದ್ದು, ಈಗಾಗಲೇ ಸುಮಾರು 22ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ಆರೋಗ್ಯ ತಪಾಷಣೆಗಾಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಕೋವಿಡ್ 19 ಪಾಸಿಟಿವ್ ವರದಿ ಬಂದಿರುವುದಾಗಿ ಮುಖರ್ಜಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು