amit shah
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸದ ಮೂಲಕ ತಳಮಟ್ಟದಸಂಘಟನೆಚುರುಕುಗೊಳಿಸುತ್ತಿರುವ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಮಾ.30 ಮತ್ತು 31ರಂದು ಮತ್ತೆ ರಾಜ್ಯಕ್ಕೆ ಬರಲಿದ್ದು, ನಾಲ್ಕು ಜಿಲ್ಲೆಗಳಿಗೆ ತೆರಳಲಿದ್ದಾರೆ.
ಮಾ.30ರಂದು ಆಗಮಿಸುವ ಅಮಿತ್ ಶಾ ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪ್ರವಾಸ
ಕೈಗೊಳ್ಳಲಿದ್ದು, ಬೂತ್ ಮಟ್ಟದ ಸಂಘಟನೆಯ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ಇದರ ಜತೆಗೆ ದೇವಸ್ಥಾನಗಳಿಗೆ ಭೇಟಿ ನೀಡುವುದಲ್ಲದೆ, ವಿವಿಧ ಸಮುದಾಯಗಳ ಪ್ರಮುಖರೊಂದಿಗೆ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ.
ಈಗಾಗಲೇ ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಿರುವ ಅಮಿತ್ ಶಾ, ತಮ್ಮ ಮೂರನೇ
ಭೇಟಿ ವೇಳೆ ಮೈಸೂರು ಭಾಗಕ್ಕೆ ಆದ್ಯತೆ ನೀಡುತ್ತಿದ್ದಾರೆ. ಆ ಮೂಲಕ ಮೈಸೂರು ಭಾಗದಲ್ಲಿ ಪಕ್ಷ ಬಲಪಡಿಸಲು ಪ್ರಯತ್ನ
ಮಾಡಲಿದ್ದಾರೆ.